MP Yaduveer draws attention to police failure in Parliament
ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ಎಂಡಿಎಂಎ ಮಾದಕ ದ್ರವ್ಯ ತಯಾರಿಕಾ ಘಟಕದ ಮೇಲೆ ನಡೆದಿರುವ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಪೊಲೀಸರ ವೈಫಲ್ಯದ ಬಗ್ಗೆ ಮೈಸೂರು- ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಸತ್‌ನಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆದರು.
ಸಂಸತ್‌ನಲ್ಲಿ ಮೈಸೂರು ಡ್ರಗ್ಸ್ ಫ್ಯಾಕ್ಟರಿ ಜಾಲ ಸದ್ದು ಮಾಡಿದ್ದಲ್ಲದೆ, ಪೊಲೀಸ್ ವೈಫಲ್ಯದ ಕುರಿತು ಸಂಸದ ಯದುವೀರ್ ಮೈಸೂರಿನಲ್ಲಿ ಅನಧಿಕೃತ ಡ್ರಗ್ಸ್ ಜಾಲದ ಕುರಿತು ಎಳೆ ಎಳೆಯಾಗಿ ಬಿಚ್ಚಿಟ್ಟು ಕಳವಳ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಸಾಂಸ್ಕೃತಿಕ ನಗರಿ ಎಂದು ಹೆಸರು ವಾಸಿಯಾಗಿರುವ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ಮಹಾರಾಷ್ಟ್ರ ಪೊಲೀಸರು ದಾಳಿ ಮಾಡಿ 390 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಇದು ನಿಜಕ್ಕೂ ಆತಂಕಕಾರಿ ಬೆಳವಣಿಗೆ ಎಂದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಹಾಗೆಯೇ ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್ ಠಾಣೆ ಮೇಲೆ ಆದ ದಾಳಿ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಮತ್ತು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಗುಪ್ತಚರ ವಿಭಾಗವು ಸಂಪೂರ್ಣ ವಿಫಲವಾಗಿದೆ ಎಂದು ಗಂಭೀರ ಆರೋಪ ಮಾಡಿದ ಯದುವೀರ್, ಗೃಹಸಚಿವ ಡಾ.ಜಿ.ಪರಮೇಶ್ವರ್ ಡ್ರಗ್ಸ್ ವಶ ಪ್ರಕರಣ ಕುರಿತು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ಇತ್ತೀಚೆಗೆ ಡ್ರಗ್ಸ್ ಜಾಲ ಪತ್ತೆಯಾಗಿತ್ತು. ರಾಜ್ಯದ ಮಾಹಿತಿ-ತಂತ್ರಜ್ಞಾನ ಸಚಿವರು ಆ ಪ್ರಕರಣದಲ್ಲಿ ತೀವ್ರ ಆಸಕ್ತಿಯನ್ನು ತೋರಿದ್ದರು ಎಂದು ಲೋಕಸಭೆಯಲ್ಲಿ ಹೇಳುವ ಮೂಲಕ ಉನ್ನತಮಟ್ಟದ ತನಿಖೆಗೆ ಒತ್ತಾಯಿಸಿದರು.
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…