ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬೆಳಗ್ಗೆ ಕರ್ನಾಟಕ ಅಂಚೆ ಇಲಾಖೆ ಆಯೋಜಿದ್ದ ಭಾರತ ಅಂಚೆ ಮೈಸೂರು ಮ್ಯಾರಥಾನ್ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.
ಮ್ಯಾರಥಾನ್‌ನಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭಾಗಿಯಾಗುವ ಮೂಲಕ ಮ್ಯಾರಥಾನ್‌ನಲ್ಲಿ ಭಾಗಿಯಾಗಿದ್ದವರಿಗೆ ಪ್ರೋತ್ಸಾಹ ನೀಡಿದರು.
ಇಂದು ಬೆಳಗ್ಗೆ ನಡೆದ ಮ್ಯಾರಥಾನ್ ಮೈಸೂರಿನ ನಜರ್ಬಾದ್ ನಲ್ಲಿರುವ ಅಂಚೆ ಇಲಾಖೆಯ ಮುಖ್ಯ ಕಚೇರಿಯಿಂದ ಚಾಮುಂಡಿ ಬೆಟ್ಟ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಹೊರಡಲು ವ್ಯವಸ್ಥೆ ಮಾಡಲಾಗಿತ್ತು. ಮ್ಯಾರಥಾನ್‌ನಲ್ಲಿ ಮೈಸೂರಿಗರು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ವಿವಿಧ ವಯೋಮಾನದವರು ಭಾಗಿಯಾಗಿದ್ದದರು.
ಇದನ್ನು ಓದಿ: ಆರ್‌ಎಸ್‌ಎಸ್‌ಗೆ ದೇಣಿಗೆ ಕೊಡುತ್ತಿರುವವರು ಯಾರು?: ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ
ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು, ಮೈಸೂರಿನಲ್ಲಿ ಮ್ಯಾರಥಾನ್ ಆಯೋಜಿಸರುವುದು ಸಂತಸವಾಗಿದೆ. ಈ ಮ್ಯಾರಥಾನ್‌ನಲ್ಲಿ ಭಾಗಿಯಾದ ಎಲ್ಲರಿಗೂ ಅಭಿನಂದನೆ ತಿಳಿಸುತ್ತೇನೆ. ಇಂತಹ ಒಳ್ಳೆಯ ಕ್ರೀಡಾ ಹಾಗೂ ವ್ಯಾಯಾಮಕ್ಕೆ ಪ್ರೋತ್ಸಾಹ ನೀಡುತ್ತಿರುವ ಅಂಚೆ ಇಲಾಖೆಗೂ ಅಭಿನಂದನೆ ಸಲ್ಲಿಸುತ್ತೇನೆ. ಇಂತಹ ಪ್ರೋತ್ಸಾಹದ ಕಾರ್ಯಕ್ರಮದಲ್ಲಿ ಹೆಚ್ಚು ಹೆಚ್ಚು ಜನರು ಭಾಗಿಯಾಗಿದ್ದಾರೆ. ಪ್ರತಿಯೊಬ್ಬರೂ ತಮ್ಮ ಅರೋಗ್ಯಯುತ ಜೀವನ ನಡೆಸಲು ಯೋಗ, ವ್ಯಾಯಾಮಗಳು ಮುಖ್ಯ ಎಂದು ತಿಳಿಸಿದರು.
ನಂತರ ಮಾತನಾಡಿದ ಅಂಚೆ ಇಲಾಖೆಯ ರಾಜ್ಯ ಮುಖ್ಯ ಚೀಫ್ ಪೋಸ್ಟ್ ಮಾಸ್ಟರ್ ಜೆನರಲ್ ಪ್ರಕಾಶ್ ಅವರು, ಪ್ರಥಮ ಬಾರಿಗೆ ಮೈಸೂರಿನಲ್ಲಿ ಮ್ಯಾರಥಾನ್ ಆಯೋಜಿಸಿದ್ದೇವೆ. ಫಿಟ್ ಇಂಡಿಯಾ ಮೂವ್‌ಮೆಂಟ್ ಮೂಲಕ ಆರೋಗ್ಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೆಚ್ಚು ಒತ್ತು ನೀಡುತ್ತಿದ್ದಾರೆ. ಇಂದಿನ ಮ್ಯಾರಥಾನ್ ಕಾರ್ಯಕ್ರಮವು ಫಿಟ್ ಇಂಡಿಯಾದ ಒಂದು ಭಾಗವಾಗಿದೆ.
ಅದರ ಜೊತೆಗೆ ಅಂಚೆ ಇಲಾಖೆಯ ಉತ್ಪನ್ನಗಳನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ. ಅಂಚೆ ಇಲಾಖೆ ಹೊಸದಾಗಿ ಪರಿಚಯಿಸಿರುವ ಅಂಚೆ ಇಲಾಖೆಯ ಆಪ್ ಬಗ್ಗೆ ಜನರಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಈ ಆಪ್ ಮೂಲಕ ಜನರು ಮನೆಯಲ್ಲೇ ಕುಳಿತು ಸೇವೆ ಪಡೆದುಕೊಳ್ಳಬಹುದು. ಎಲ್ಲಾ ಅಂಚೆ ವ್ಯವಹಾರವನ್ನು ಜನರು ಮನೆಯಲ್ಲೇ ಕುಳಿತು ವ್ಯವಹರಿಸಬಹುದು, ಇಂದಿನ ಮ್ಯಾರಥಾನ್‌ನಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…