ಮೈಸೂರು: ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ದಿಶಾ ಸಭೆಯಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನಾ ಅನುಷ್ಠಾನ ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಪಾಲ್ಗೊಂಡು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು(ಜನವರಿ.4) ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಹಾಗೂ ವಿವಿಧ ಅಭಿವದ್ದಿ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್. ಡಿ. ಕುಮಾರಸ್ವಾಮಿˌ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನೀಲ್ ಬೋಸ್ˌ ಶಾಸಕರಾದ ಶ್ರೀವತ್ಸˌ ಜಿ.ಡಿ. ಹರೀಶ್ ಗೌಡ ಹಾಗೂ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಸೇರಿದಂತೆ ಅನೇಕ ವಿಭಾಗಗಳ ಅಧಿಕಾರಿಗಳು ಭಾಗವಹಿಸಿದ್ದರು.