ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಾಡಹಬ್ಬ ಮೈಸೂರು ದಸರಾ 2025ರ ಮನೆಮನೆ ಗೊಂಬೆ ಗೊಂಬೆ ಕೂರಿಸುವ ಸ್ಪರ್ಧೆಯನ್ನು ಆಯೋಜಿಸಿದ್ದು ಸ್ಪರ್ಧೆಯ ಪೋಸ್ಟರನ್ನು ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೆಎಮ್‌ಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಅವರು ಸ್ಪರ್ಧೆಯ ಬಗ್ಗೆ ಮಾಹಿತಿ ನೀಡಿದರು. ಸ್ಪರ್ಧೆ ಮಾಡುವವರಿಗೆ 200 ರೂ ನೋಂದಣಿ ಶುಲ್ಕ ಇರುತ್ತದೆ. ದಸರಾ ಗೊಂಬೆ ಸ್ಪರ್ಧೆಯು ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನೆಲೆ ಒಳಗೊಂಂಡಿದೆ. ಗೊಂಬೆಗಳನ್ನು ಕೂರಿಸಿದ 10 ವಿಜೇತರಿಗೆ ಶ್ರೀ ಶ್ರೀ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲೇ ಬಹುಮಾನ ಹಾಗೂ ಪ್ರಮಾಣಪತ್ರ ನೀಡಲಾಗುವುದು. ಸ್ಪರ್ಧೆಯಲ್ಲಿ ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು.
ಕಡೆಯ ದಿನಾಂಕ 2/10/2025 ರ ಒಳಗೆ 8971389539ಈ ದೂರವಾಣಿ ಸಂಖ್ಯೆಗೆ ವಾಟ್ಸ್ ಆ್ಯಪ್ ಮೂಲಕ ಗೊಂಬೆ ಜೋಡಣೆ ಮಾಡಿರುವ ಚಿತ್ರ ಹಾಗೂ 3 ನಿಮಿಷದ ವೀಡಿಯೊವನ್ನು ಕಲಿಸಿಕೊಡಬೇಕು ಆನಂತರ ನುರಿತ ತೀರ್ಪುಗಾರರು ಅವರ ನಿವಾಸಕ್ಕೆ ತೆರಳಿ ವೀಕ್ಷಿಸಿ ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡ ಅದ್ಭುತವಾಗಿ ಗೊಂಬೆ ಜೋಡಣೆ ಮಾಡಿದಂತಹ ಸ್ಪರ್ಧಿಗಳನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು
ಇದೇ ಸಂದರ್ಭದಲ್ಲಿ ಶಾಸ ಟಿ ಎಸ್ ಶ್ರೀವತ್ಸ, ಮಾಜಿ ಮಹಾಪೌರ ಶಿವಕುಮಾರ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್, ಮುಖಂಡರಾದ ಮಹೇಶ್ ರಾಜ್ ಅರಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…