ಮೈಸೂರು: ಕನ್ನಡದ ಅಸ್ಮಿತೆ ಎಂದು ಹೇಳಿಕೊಳ್ಳುವವ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಬೇಜವಾಬ್ದಾರಿತನದಿಂದಾಗಿ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಗೊಂದಲಕ್ಕೊಳಗಾಗುತ್ತಿರುವುದು ವಿಷಾದನೀಯ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆಗಸ್ಟ್ ತಿಂಗಳಿನಲ್ಲಿ ಕೆಪಿಎಸ್‌ಸಿಯೂ ನಡೆಸಿದ ಕೆಎಎಸ್ ಪರೀಕ್ಷೆಯ ಭಾಷಾಂತರದಲ್ಲಿ ಲೋಪವಾಗಿ ದೊಡ್ಡ ಎಡವಟ್ಟು ಮಾಡಿಕೊಂಡು ಲಕ್ಷಾಂತರ ಪರೀಕ್ಷಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇಷ್ಟು ವಿಳಂಬದ ನಂತರವೂ ಭಾನುವಾರದ(ಡಿ.29 ಮರುಪರೀಕ್ಷೆಯಲ್ಲಿ ಭಾಷಾಂತರದಲ್ಲಿ ಮತ್ತೆ ಲೋಪ ಕಂಡು ಬಂದಿದೆ. ಅಲ್ಲದೇ ಒಎಂಆರ್ ಶೀಟ್ ಸಂಖ್ಯೆಗಳು ಅದಲು ಬದಲಾಗಿ ಮತ್ತೊಂದು ದೊಡ್ಡ ಅನಾಹುತಕ್ಕೆ ಎಡೆ ಮಾಡಿದೆ ಎಂದು ಕಿಡಿಕಾರಿದ್ದಾರೆ.
‘ಕನ್ನಡದ ಅಸ್ಮಿತೆ’ ಗೆ ಬದ್ಧರಾಗಿದ್ದೆವೆ ಎಂದು ಹೇಳಿಕೊಳ್ಳುವ ಸರ್ಕಾರ ಇಂದು ಲಕ್ಷಾಂತರ ಮಂದಿ ಪರೀಕ್ಷಾರ್ಥಿಗಳ ಕನಸನ್ನು ನುಚ್ಚು ನೂರು ಮಾಡಿದೆ. ಕರ್ನಾಟಕದ ಮಾತೃ ಭಾಷೆಯಲ್ಲೇ ಸರಿಯಾದ ಪ್ರಶ್ನೆಗಳನ್ನು ನೀಡುವಲ್ಲಿ ಮತ್ತು ಭಾಷಾಂತರಿಸುವುದರಲ್ಲಿ ಎರಡು ಬಾರಿ ವಿಫಲವಾಗಿರುವ ರಾಜ್ಯ ಸರ್ಕಾರದ ಅಧೀನ ಸಂಸ್ಥೆಯಾದ ಕೆಪಿಎಸ್‌ಸಿಯೂ ಇನ್ನೆಷ್ಟು ಬಾರಿ ಪರಿಕ್ಷಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿದೆ? ಇಂತಹ ಗೊಂದಲಗಳು ಬೇಜವಾಬ್ದಾರಿತನ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಒದಗಿಸಬೇಕಾಗಿರುವುದು ಸರ್ಕಾರದ ಕರ್ತವ್ಯ ಎಂದು ಆಗ್ರಹಿಸಿದ್ದಾರೆ.





