ಮೈಸೂರು ನಗರ

ಕನ್ನಡದ ಅಸ್ಮಿತೆಗೆ ಬದ್ಧರಾಗಿದೆಂದು ಹೇಳಿಕೊಳ್ಳುವ ಸರ್ಕಾರ ಮತ್ತೊಮ್ಮೆ ಕೆಎಎಸ್‌ ಮರು ಪರೀಕ್ಷೆಯಲ್ಲಿ ಎಡವಟ್ಟು: ಸಂಸದ ಯದುವೀರ್‌ ವಾಗ್ದಾಳಿ

ಮೈಸೂರು: ಕನ್ನಡದ ಅಸ್ಮಿತೆ ಎಂದು ಹೇಳಿಕೊಳ್ಳುವವ ಕಾಂಗ್ರೆಸ್‌ ಸರ್ಕಾರದ ಆಡಳಿತ ವೈಫಲ್ಯ ಮತ್ತು ಬೇಜವಾಬ್ದಾರಿತನದಿಂದಾಗಿ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಗೊಂದಲಕ್ಕೊಳಗಾಗುತ್ತಿರುವುದು ವಿಷಾದನೀಯ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಆಗಸ್ಟ್ ತಿಂಗಳಿನಲ್ಲಿ ಕೆಪಿಎಸ್‌ಸಿಯೂ ನಡೆಸಿದ ಕೆಎಎಸ್ ಪರೀಕ್ಷೆಯ ಭಾಷಾಂತರದಲ್ಲಿ ಲೋಪವಾಗಿ ದೊಡ್ಡ ಎಡವಟ್ಟು ಮಾಡಿಕೊಂಡು ಲಕ್ಷಾಂತರ ಪರೀಕ್ಷಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇಷ್ಟು ವಿಳಂಬದ ನಂತರವೂ ಭಾನುವಾರದ(ಡಿ.29 ಮರುಪರೀಕ್ಷೆಯಲ್ಲಿ ಭಾಷಾಂತರದಲ್ಲಿ ಮತ್ತೆ ಲೋಪ ಕಂಡು ಬಂದಿದೆ. ಅಲ್ಲದೇ ಒಎಂಆರ್ ಶೀಟ್ ಸಂಖ್ಯೆಗಳು ಅದಲು ಬದಲಾಗಿ ಮತ್ತೊಂದು ದೊಡ್ಡ ಅನಾಹುತಕ್ಕೆ ಎಡೆ ಮಾಡಿದೆ ಎಂದು ಕಿಡಿಕಾರಿದ್ದಾರೆ.

‘ಕನ್ನಡದ ಅಸ್ಮಿತೆ’ ಗೆ ಬದ್ಧರಾಗಿದ್ದೆವೆ ಎಂದು ಹೇಳಿಕೊಳ್ಳುವ ಸರ್ಕಾರ ಇಂದು ಲಕ್ಷಾಂತರ ಮಂದಿ ಪರೀಕ್ಷಾರ್ಥಿಗಳ ಕನಸನ್ನು ನುಚ್ಚು ನೂರು ಮಾಡಿದೆ. ಕರ್ನಾಟಕದ ಮಾತೃ ಭಾಷೆಯಲ್ಲೇ ಸರಿಯಾದ ಪ್ರಶ್ನೆಗಳನ್ನು ನೀಡುವಲ್ಲಿ ಮತ್ತು ಭಾಷಾಂತರಿಸುವುದರಲ್ಲಿ ಎರಡು ಬಾರಿ ವಿಫಲವಾಗಿರುವ ರಾಜ್ಯ ಸರ್ಕಾರದ ಅಧೀನ ಸಂಸ್ಥೆಯಾದ ಕೆಪಿಎಸ್‌ಸಿಯೂ ಇನ್ನೆಷ್ಟು ಬಾರಿ ಪರಿಕ್ಷಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿದೆ? ಇಂತಹ ಗೊಂದಲಗಳು ಬೇಜವಾಬ್ದಾರಿತನ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಒದಗಿಸಬೇಕಾಗಿರುವುದು ಸರ್ಕಾರದ ಕರ್ತವ್ಯ ಎಂದು ಆಗ್ರಹಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

58 mins ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

3 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

3 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

3 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

4 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

4 hours ago