ಮೈಸೂರು: ಮೈಸೂರು- ಕೊಡಗು ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ದಂಪತಿಯ ಕಿರಿಯ ಪುತ್ರನಿಗೆ ಚಾಮುಂಡಿ ಬೆಟ್ಟದಲ್ಲಿ ತೊಟ್ಟಿಲು ಶಾಸ್ತ್ರ ನೆರವೇರಿಸಿದ್ದಾರೆ.
ಮೈಸೂರು ದಸರಾ ಸಂದರ್ಭದಲ್ಲಿ ಆಯುಧಪೂಜೆ ದಿನದಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾ ದಂಪತಿಗೆ ಎರಡನೇ ಪುತ್ರ ಜನಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು(ಡಿ.11) ಬೆಳಿಗ್ಗೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ತೊಟ್ಟಿಲು ಶಾಸ್ತ್ರ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದ್ದಾರೆ.
ಈ ಕುರಿತು ಚಾಮುಂಡೇಶ್ವರಿ ದೇವಿಗೆ ಪೂಜೆ ಕಾರ್ಯಕ್ರಮಗಳು ಮುಗಿದ ಬಳಿಕ ದೇವಾಲಯದ ಆವರಣದಲ್ಲಿರುವ ಸಂಪಿಗೆ ಮರಕ್ಕೆ ತೊಟ್ಟಿಲು ಕಟ್ಟಿ ಪೂಜೆ ಸಲ್ಲಿಸಿದ್ದಾರೆ. ಆ ನಂತರ ತಮ್ಮ ಎರಡನೇ ಮಗನನ್ನು ತೊಟ್ಟಿಲಿಗೆ ಹಾಕಿ ತೊಟ್ಟಿಲು ಶಾಸ್ತ್ರವನ್ನು ನೆರವೇರಿಸಿದ್ದಾರೆ.
ಇನ್ನು ಈ ಸಂದರ್ಭದಲ್ಲಿ ರಾಜ ಮಾತೆ ಪ್ರಮೋದಾದೇವಿ ಒಡೆಯರ್ ಹಾಗೂ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾ ದೇವಿಯವರ ಪ್ರಥಮ ಪುತ್ರ ಆದ್ಯವೀರ್ ಉಪಸ್ಥಿತರಿದ್ದರು.