ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು, ‘ಕೆಆರ್‌ಎಸ್ ರಸ್ತೆಗೆ ಯಾವುದೇ ಅಧಿಕೃತ ಹೆಸರಿನ ಉಲ್ಲೇಖವಿಲ್ಲ’ ಎಂದು ಹೇಳಿದ್ದಾರೆ. ಆದರೆ ಅಧಿಕೃತವಾಗಿ 1921ರಲ್ಲಿ ಮೈಸೂರು ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿಯು ಈ ರಸ್ತೆಗೆ ಪ್ರಿನ್ಸೆಸ್ ರಸ್ತೆ ಎಂದು ನಾಮಕರಣ ಮಾಡಿರುವುದಕ್ಕೆ ದಾಖಲೆ ಇದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಟಾಂಗ್ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕೆಆರ್‌ಎಸ್ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಬಗ್ಗೆ ಉಲ್ಲೇಖಗಳಿಲ್ಲ ಎಂದು ಹೇಳುತ್ತಿರುವ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರೇ ಈ ದಾಖಲೆಗಳನ್ನೊಮ್ಮೆ ನೋಡಿ. ಮೈಸೂರು ಸಂಸ್ಥಾನದ ದಿವಾನರಾದ ಮಿರ್ಜಾ ಇಸ್ಮಾಯಿಲ್ ಅವರ ದೂರದ ಸಂಬಂಧಿಯೊಬ್ಬರು ಪ್ರಿನ್ಸೆಸ್ ರಸ್ತೆ ಎಂದು ಕರೆಯಲ್ಪಡುವ ಸ್ಥಳದಲ್ಲಿ ವಾಸಿಸುತ್ತಿದ್ದರು. ಈ ವಿಳಾಸದಿಂದ ಕಳುಹಿಸಲಾದ ಪತ್ರಗಳು ಸಹ ಪ್ರಿನ್ಸೆಸ್ ರಸ್ತೆಯ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ ಎಂದು ತಿಳಿಸಿದ್ದಾರೆ.
ಭಾರತ ಸರ್ಕಾರದ ಸರ್ವೆ ಮತ್ತು ಮ್ಯಾಪಿಂಗ್ ಹೊಂದಿರುವ ಸರ್ಕಾರಿ ಇಲಾಖೆಯವರು ಅಧಿಕೃತವಾಗಿ ಪ್ರಕಟಿಸಿರುವ ಮೈಸೂರು ಪ್ರವಾಸದ ನಕ್ಷೆ/ಮಾರ್ಗದರ್ಶಿಯಲ್ಲಿರುವ ಮೈಸೂರಿನ ನಕ್ಷೆಯಲ್ಲಿಯೂ ಸಹ ಪ್ರಿನ್ಸೆಸ್ ರಸ್ತೆ ಎಂದು ಸ್ಪಷ್ಟವಾಗಿ ಗುರುತಿಸಿ ಹೆಸರುಸಲಾಗಿದೆ. ಇನ್ನೂ ಅಧಿಕೃತವಾಗಿ ಮೈಸೂರು ನಗರಾಭಿವೃದ್ಧಿ ಟ್ರಸ್ಟ್ ಬೋರ್ಡ್ ಈ ರಸ್ತೆಯನ್ನು ಔಪಚಾರಿಕವಾಗಿ ಪ್ರಿನ್ಸೆಸ್ ರಸ್ತೆಯೆಂದು ನಾಮಕರಣ ಮಾಡಿರುವುದಕ್ಕೆ 1921ರ ದಾಖಲೆಗಳು ದೃಢಪಡಿಸುತ್ತವೆ. ಹೀಗಾಗಿ ಈ ಮೇಲಿನ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದರೆ, ಯೋಗ್ಯವಾದ ಗಮನಾರ್ಹ ಪುರಾವೆಗಳನ್ನು ಒದಗಿಸುತ್ತವೆ ಎಂದು ತಿರುಗೇಟು ನೀಡಿದ್ದಾರೆ.
ಈ ರಸ್ತೆಗೆ ಮರುನಾಮಕರಣವನ್ನು ಪ್ರಸ್ತಾಪಿಸುವ ಮೂಲಕ ಅನಗತ್ಯ ಗೊಂದಲವನ್ನು ಸೃಷ್ಟಿಸುವ ಬದಲು, ರಸ್ತೆಯ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಒಪ್ಪಿಕೊಳ್ಳುವುದು ಅತ್ಯಗತ್ಯ. ಅದರ ಮೂಲಗಳನ್ನು ಪರಿಶೀಲಿಸಿ, ಅಂದಿನ ರಾಜಮನೆತನ ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ಗುರುತಿಸಿ ಗೌರವಿಸಬೇಕು. ಅವರ ಪರಂಪರೆಯನ್ನು ಕಾಲ ಕಾಲಕ್ಕೂ ಶಾಶ್ವತವಾಗಿ ಸಂರಕ್ಷಿಸಿರುವುದನ್ನು ಮತ್ತು ಮುಂದಿನ ಪೀಳಿಗೆಗೆ ಈ ಪರಂಪರೆಯನ್ನು ಪರಿಚಯಿಸುವುದು ಪಾಲಿಕೆ ಹಾಗೂ ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಎರಡು ವರ್ಷಗಳ ಹಿಂದೆ ‘ಜಿಮ್ಮಿ’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿಯಾಗಿತ್ತು. ಈ ಚಿತ್ರವನ್ನು…
ಕಳೆದ ವರ್ಷದ ಆರಂಭದಲ್ಲೇ, ತಮ್ಮ ಹೊಸ ಕನಸಿನ ಬಗ್ಗೆ ಪೋಸ್ಟ್ ಹಾಕಿದ್ದರು ‘ಕನ್ನಡತಿ’ ಖ್ಯಾತಿಯ ರಂಜನಿ ರಾಘವನ್. ಆದರೆ, ಆ…
ಹುಣಸೂರು: ಮೈಸೂರು-ಹುಣಸೂರು ಹೆದ್ದಾರಿಯ ಸೋಮನಹಳ್ಳಿ ಬಳಿಯಲ್ಲಿ ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 6 ಮಂದಿ ತೀವ್ರವಾಗಿ ಗಾಯಗೊಂಡಿದ್ದು,…
ನಾಳೆ "ಸಂವಿಧಾನವನ್ನು ಬದಲಾಯಿಸಿದ್ದು ಯಾರು" ಎಂಬ ವಿಚಾರ ಗೋಷ್ಠಿ ಮೈಸೂರು: ಸಿಟಿಜನ್ ಫಾರ್ ಸೋಶಿಯಲ್ ಜಸ್ಟಿಸ್ ವತಿಯಿಂದ ಜ.5 ರ…
ಮೈಸೂರು: ನಗರದ ಹೆಬ್ಬಾಳ್‌ನಲ್ಲಿರುವ ಇನ್ಫೋಸಿಸ್ ಆವರಣದಲ್ಲಿ ಭೀತಿ ಸೃಷ್ಟಿಸಿದ್ದ ಚಿರತೆಯ ಚಲನವಲನ ನಾಲ್ಕು ದಿನಗಳು ಕಳೆದರೂ ಪತ್ತೆಯಾಗಿಲ್ಲ. ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ…
ಮಂಗಳೂರು: ನಗರದ ಲೇಡಿಹಿಲ್ ಬಳಿ ಶನಿವಾರ ಸಂಜೆ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧರಲ್ಲಿ ಬೆಂಕಿಯು ಕಾರನ್ನು ಸುತ್ತುವರಿದಿದೆ.…