ಮೈಸೂರು ನಗರ

ಮೈಸೂರು: ಅಶೋಕಪುರಂ ರೈಲ್ವೆ ನಿಲ್ದಾಣದವರೆಗೆ ಎಂಟು ರೈಲುಗಳ ಸೇವೆ ವಿಸ್ತಾರ-ಸಂಸದ ಯದುವೀರ್‌

ಮೈಸೂರು: ಶೀಘ್ರದಲ್ಲೇ ನಗರದ ಅಶೋಕಪುರಂ ರೈಲ್ವೆ ನಿಲ್ದಾಣದವರೆಗೂ ಎಂಟು ರೈಲುಗಳ ಸೇವೆ ವಿಸ್ತಾರಗೊಳ್ಳಲಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮಾಹಿತಿ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಶೀಘ್ರದಲ್ಲಿ ಇಲ್ಲಿನ ಅಶೋಕಪುರಂ ರೈಲ್ವೆ ನಿಲ್ದಾಣದವರೆಗೆ ಎಂಟು ರೈಲುಗಳ ಸೇವೆ ವಿಸ್ತಾರಗೊಳ್ಳಲಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದಿದ್ದಾರೆ.

ಟ್ರ್ಯಾಕ್ 1 ರಿಂದ 5ರವರೆಗೆ ಸಂಪೂರ್ಣ ವಿದ್ಯುದಿಕರಣಗೊಳಿಸಿˌ ಅಶೋಕಪುರಂ ಯಾರ್ಡ್’ನ ಮೂಲಕ ರೈಲು ಸೇವೆ ಕಾರ್ಯಾರಂಭಗೊಂಡು ಜನತೆಗೆ ಅನುಕೂಲವಾಗುವಂತೆ ಮಾಡಿದ ನೈಋತ್ಯ ರೈಲ್ವೆ ಇಲಾಖೆಯ ಪರಿಶ್ರಮ ಹಾಗೂ ಅವರ ಕಾರ್ಯಕ್ಷಮತೆ ಪ್ರಶಂಸನೀಯವಾಗಿದೆ ಇದಕ್ಕಾಗಿ ನಾನು ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಸರ್ಕಾರದ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರ ನೇತೃತ್ವದಲ್ಲಿ ಭಾರತೀಯ ರೈಲು ಸೇವೆ ಸಂಪೂರ್ಣವಾಗಿ ಪರಿವರ್ತನೆಗೊಂಡಿದೆ ಎಂಬುದಕ್ಕೆ ಈ ಪ್ರಯತ್ನ ಸಾಕ್ಷಿಯಾಗಿದೆ. ಅಶೋಕಪುರಂವರೆಗಿನ ರೈಲು ಸೇವೆಗಳ ವಿಸ್ತರಣೆಯು ಮೈಸೂರು ಮತ್ತು ಹತ್ತಿರದ ಪ್ರದೇಶದ ಪ್ರಯಾಣಿಕರಿಗೆ ಬಹಳಷ್ಟು ಅನುಕೂಲವಾಗಲಿದೆ. ನೈಋತ್ಯ ರೈಲ್ವೆಯು ಸಂಪರ್ಕ ಮತ್ತು ಮೂಲ ಸೌಕರ್ಯವನ್ನು ಸುಧಾರಿಸುವಲ್ಲಿ ದಾಪುಗಾಲು ಹಾಕುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಶೋಕಪುರಂ ರೈಲು ನಿಲ್ದಾಣದವರೆಗೆ ವಿಸ್ತಾರವಾಗಿರುವ ರೈಲು ಸೇವೆಗಳು ಹಾಗೂ ಅಶೋಕಪುರಂನಿಂದ ಪ್ರಾರಂಭವಾಗುವ ರೈಲು ಸೇವೆಗಳ ಪಟ್ಟಿ ಇಂತಿವೆ.

1.MAS-MYS-MAS ಕಾವೇರಿ ಎಕ್ಸ್‌ಪ್ರೆಸ್(16021/22)
2. MAS-MYS-MAS ಎಕ್ಸ್‌ಪ್ರೆಸ್‌(12609/10)
3. SBC-MYS-SBC ಮಾಲ್ಗುಡಿ ಎಕ್ಸ್‌ಪ್ರೆಸ್‌(20624/23)
4. KCG-MYS-KCG ಎಕ್ಸ್‌ಪ್ರೆಸ್‌(12785/86)
5. SBC-MYS-SBC ಮೆಮು(06525/26)
6. SBC-MYS-SBC ಮೆಮು(06559/60)
7. SBC-MYS-SBC ಮೆಮು(06255/56)
8. SBC-MYS ಮೆಮು(06257/58)

 

ಅರ್ಚನ ಎಸ್‌ ಎಸ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

10 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

13 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

13 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

17 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

22 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

22 hours ago