Mysore
26
light rain

Social Media

ಮಂಗಳವಾರ, 08 ಅಕ್ಟೋಬರ್ 2024
Light
Dark

ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ್ ಒಡೆಯರ್ ಭೇಟಿ : ಡೆಂಗ್ಯೂ ಕುರಿತು ವೈದ್ಯರಿಂದ ಮಾಹಿತಿ

ಮೈಸೂರು : ಬೆಂಗಳೂರು ಬಳಿಕ ಮೈಸೂರಿನಲ್ಲಿಯೂ ಕೂಡ ಹೆಚ್ಚಾಗಿ ಡೆಂಗ್ಯೂ ಪ್ರಕರಣಗಳು ಕಂಡು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು  ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ ನೀಡಿದ್ದರು.

ಮೇಟಗಳ್ಳಿಯಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌, ಡೆಂಗ್ಯೂ ಪ್ರಕರಣ ಕುರಿತಂತೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಆಸ್ಪತ್ರೆಯ ಪ್ರತಿ ವಾರ್ಡ್‌ ಗಳಿಗೆ ಭೇಟಿ ನೀಡಿ ಪರಿಶೀಲನೆ ಕೂಡ ನಡೆಸಿ ಡೆಂಗ್ಯೂ ನಿಯಂತ್ರಣಕ್ಕೆ ಸಂಬಂಧ ಪಟ್ಟಂತೆ ಅಧಿಕಾರಿಗಳಿಂದಲೂ ಮಾಹಿತಿ ಪಡೆದುಕೊಂಡರು.

ಇನ್ನು ಇದೇ ವೇಳೆ ಮಾತನಾಡಿದ ಅವರು, ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದೇನೆ.  ನಮ್ಮ ವೈದ್ಯರು ಕೂಡ ಉತ್ತಮ ರೀತಿಯಲ್ಲಿ ಚಿಕಿತ್ಸೆ ಕೊಡುತ್ತಿದ್ದಾರೆ. ಡೆಂಗ್ಯೂ ನಿಯಂತ್ರಣ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಡೆಂಗ್ಯೂ ನಿಯಂತ್ರಣ ಹಾಗೂ ಡೆಂಗ್ಯೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಸಭೆ ಮಾಡಬೇಕು ಅಂದುಕೊಂಡಿದ್ದೇವೆ. ಈ ಜಿಲ್ಲಾಸ್ಪತ್ರೆಯಲ್ಲಿ ಅಗತ್ಯ ಸಲಕರಣೆಯ ಕೊರತೆ ಇದ್ದು ಇದರ ಬಗ್ಗೆ ಸೂಕ್ತ ಕ್ರಮಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭ ಸಂಸದ ಯದುವೀರ್‌ ಗೆಮಾಜಿ ಶಾಸಕ ಎಲ್‌ ನಾಗೇಂದ್ರ, ಡಿಎಚ್‌ ಓ ಡಾ.ಕುಮಾರಸ್ವಾಮಿ ಸಾಥ್‌ ಕೊಟ್ಟಿದ್ದಾರೆ.

Tags: