ಮೈಸೂರು ನಗರ

ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ್ ಒಡೆಯರ್ ಭೇಟಿ : ಡೆಂಗ್ಯೂ ಕುರಿತು ವೈದ್ಯರಿಂದ ಮಾಹಿತಿ

ಮೈಸೂರು : ಬೆಂಗಳೂರು ಬಳಿಕ ಮೈಸೂರಿನಲ್ಲಿಯೂ ಕೂಡ ಹೆಚ್ಚಾಗಿ ಡೆಂಗ್ಯೂ ಪ್ರಕರಣಗಳು ಕಂಡು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು  ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ ನೀಡಿದ್ದರು.

ಮೇಟಗಳ್ಳಿಯಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌, ಡೆಂಗ್ಯೂ ಪ್ರಕರಣ ಕುರಿತಂತೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಆಸ್ಪತ್ರೆಯ ಪ್ರತಿ ವಾರ್ಡ್‌ ಗಳಿಗೆ ಭೇಟಿ ನೀಡಿ ಪರಿಶೀಲನೆ ಕೂಡ ನಡೆಸಿ ಡೆಂಗ್ಯೂ ನಿಯಂತ್ರಣಕ್ಕೆ ಸಂಬಂಧ ಪಟ್ಟಂತೆ ಅಧಿಕಾರಿಗಳಿಂದಲೂ ಮಾಹಿತಿ ಪಡೆದುಕೊಂಡರು.

ಇನ್ನು ಇದೇ ವೇಳೆ ಮಾತನಾಡಿದ ಅವರು, ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದೇನೆ.  ನಮ್ಮ ವೈದ್ಯರು ಕೂಡ ಉತ್ತಮ ರೀತಿಯಲ್ಲಿ ಚಿಕಿತ್ಸೆ ಕೊಡುತ್ತಿದ್ದಾರೆ. ಡೆಂಗ್ಯೂ ನಿಯಂತ್ರಣ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಡೆಂಗ್ಯೂ ನಿಯಂತ್ರಣ ಹಾಗೂ ಡೆಂಗ್ಯೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಸಭೆ ಮಾಡಬೇಕು ಅಂದುಕೊಂಡಿದ್ದೇವೆ. ಈ ಜಿಲ್ಲಾಸ್ಪತ್ರೆಯಲ್ಲಿ ಅಗತ್ಯ ಸಲಕರಣೆಯ ಕೊರತೆ ಇದ್ದು ಇದರ ಬಗ್ಗೆ ಸೂಕ್ತ ಕ್ರಮಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭ ಸಂಸದ ಯದುವೀರ್‌ ಗೆಮಾಜಿ ಶಾಸಕ ಎಲ್‌ ನಾಗೇಂದ್ರ, ಡಿಎಚ್‌ ಓ ಡಾ.ಕುಮಾರಸ್ವಾಮಿ ಸಾಥ್‌ ಕೊಟ್ಟಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ನಮ್ಮ ಗುರು ಇನ್ನು “ಡಾಕ್ಟರ್ ಗುರು!”

ಕನ್ನಡ ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿ ಹಲವು ಯಶಸ್ವಿ 'ಆಪರೇಷನ್ ಗಳನ್ನು ಮಾಡಿದ ಹೆಸರಾಂತ ಹಾಗೂ ಸುರದ್ರೂಪಿ ಸಂಗೀತ ನಿರ್ದೇಶಕ ಗುರುಕಿರಣ್…

6 hours ago

ಎತ್ತಿನಹೊಳೆ| ಕಾಂಗ್ರೆಸ್ ಸರ್ಕಾರದ ಮತ್ತೊಂದು ಬಂಡಲ್ ಬೊಗಳೆ: ಹೀಗಂದಿದ್ಯಾರು?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್…

6 hours ago

ಆದಿಚುಂಚನಗಿರಿ ಕ್ಷೇತ್ರ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಸಚಿವ ಎನ್‌ ಎಸ್‌ ಭೋಸರಾಜು ಭೇಟಿ

ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವ ಭರವಸೆ ಮಂಡ್ಯ : ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಿರ್ಮಿಸಲಾಗುತ್ತಿರುವ…

7 hours ago

ನಿರ್ದೇಶಕ ನಾಗಶೇಖರ್‌ ಕಾರು ಅಪಘಾತ: ಓರ್ವ ಮಹಿಳೆಗೆ ಗಾಯ

ಬೆಂಗಳೂರು: ಚಂದನವನದ ನಿರ್ದೇಶಕ ನಾಗಶೇಖರ್‌ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಓರ್ವ ಮಹಿಳೆಗೆ ಗಾಯವಾಗಿದೆ. ನಾಗಶೇಖರ್‌ ಚಾಲನೆ ಮಾಡುತ್ತಿದ್ದ ಕಾರು ನಿಯಂತ್ರಣ…

8 hours ago

ARM ಟ್ರೈಲರ್ ಮೆಚ್ಚಿದ ಪ್ರಶಾಂತ್ ನೀಲ್

ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌,  “ಎಆರ್‌ಎಂ” ಸಿನಿಮಾದ ಟ್ರೈಲರನ್ನು ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಹೊಂಬಾಳೆ…

8 hours ago

2026-27 ರೊಳಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸುವ ವಿಶ್ವಾಸ: ಸಿಎಂ ಸಿದ್ದರಾಮಯ್ಯ

ಹಾಸನ(ಸಕಲೇಶಪುರ): ರಾಜ್ಯದ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026-27 ರೊಳಗೆ ಎತ್ತಿನಹೊಳೆ ಯೋಜನೆಯನ್ನು…

8 hours ago