ಮೈಸೂರು ನಗರ

ಮೈಸೂರಿನ ಜೆಡಿಎಸ್ ಕಚೇರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ

ಮೈಸೂರು : ಇಂದು ನಗರದ ಜೆಡಿಎಸ್‌ ಕಚೇರಿಗೆ  ಬಿಜೆಪಿ  ಸಂಸದ ಯದುವೀರ್‌ ಭೇಟಿ ನೀಡಿದ್ದು, ಕಚೇರಿಗೆ ಬಂದ ಯದುವೀರ್‌ ರನ್ನ ತೆನೆ ನಾಯಕರು ಸ್ವಾಗತಿಸಿದ್ದಾರೆ.  ಜೆಡಿಎಸ್‌ ಕಾರ್ಯಕರ್ತರನ್ನ ಭೇಟಿ ಮಾಡಿದ ಬಳಿಕ ಗೆಲುವಿಗೆ ಸಹಕರಿಸಿದ ದಳಪತಿಗಳಿಗೆ ಯದುವೀರ್‌ ಅಭಿನಂದನೆ ಸಲ್ಲಿಸಿದರು.

ಇದೇ ವೇಳೆ ಮಾತನಾಡಿದ ಅವರು, ಇನ್ನುಮುಂದೆ ನಿಮ್ಮೊಂದಿಗೆ ಸೇರಿ ಕೆಲಸ ಮಾಡುತ್ತೇನೆ. ಯಾವುದೇ ಸಮಸ್ಯೆಗಳು ಇದ್ದರೂ ಕೂಡ ನನ್ನ ಕಾರ್ಯಾಲಯಕ್ಕೆ ಬನ್ನಿ. ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿಯಾಗಿರುವುದು ಖುಷಿ ವಿಚಾರ. ಮಂಡ್ಯದಲ್ಲಿ ನಮ್ಮ ಮೈತ್ರಿಗಿಂತ ಕುಮಾರಸ್ವಾಮಿ ಅವರ ಕೆಲಸವನ್ನು ಜನರು ಮೆಚ್ಚಿದ್ದಾರೆ ಎಂದು ಹೇಳಿದರು.

ಇನ್ನು ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಾರಾ ಮಹೇಶ್‌ ಸೇರಿದಂತೆ ಜೆಡಿಎಸ್‌ ನ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

7 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

8 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

8 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

9 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

9 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

10 hours ago