Mysore
21
haze

Social Media

ಗುರುವಾರ, 09 ಜನವರಿ 2025
Light
Dark

ವಿವಿಧ ಗ್ರಾಮಗಳಿಗೆ ತೆರಳಿ, ಜನರ ಕುಂದು ಕೊರತೆಗಳ ಅಹವಾಲು ಸ್ವೀಕರಿಸಿದ ಸಂಸದ ಯದುವೀರ್‌

ಮೈಸೂರು: ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಇಂದು ವಿವಿಧ ಗ್ರಾಮಗಳಿಗೆ ತೆರಳಿ ಜನರಿಂದ ಕುಂದು ಕೊರತೆಗಳ ಅಹವಾಲುಅನ್ನು ಸ್ವೀಕರಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಇಂದು ಮೈಸೂರಿನ ಹಂಚ್ಯಾ ಗ್ರಾಮ, ರಮ್ಮನಹಳ್ಳಿ ಗ್ರಾಮ, ಕಾಮನಕೆರೆ ಹಾಗೂ ಹಳೆ ಕೆಸರೆ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ವೇಳೆ ಭೇಟಿ ನೀಡಿದ ಗ್ರಾಮದ ಸಾರ್ವಜನಿಕರೊಂದಿಗೆ ಸಭೆ ನಡೆಸಿˌ ಅವರ ಕುಂದು ಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಲಾಯಿತು. ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಾಯಿತು. ಇದೇ ವೇಳೆ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಹಾಗೂ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಗ್ರಾಮಗಳ ಅಭಿವೃದ್ದಿಗೆ ಕೈಗೊಳ್ಳಲಾಗಿರುವ ಕಾರ್ಯಗಳ ಕುರಿತು ಗ್ರಾಮಸ್ಥರಿಗೆ ವಿವರಿಸಲಾಯಿತು ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ನಾಯಕ ಕವೀಶ್ ಗೌಡ, ಪ್ರಧಾನ ಕಾರ್ಯದರ್ಶಿ ಬಿ. ಎಂ. ರಘು ಸೇರಿದಂತೆ ಅನೇಕ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags: