ಮೈಸೂರು: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ವಿವಿಧ ಗ್ರಾಮಗಳಿಗೆ ತೆರಳಿ ಜನರಿಂದ ಕುಂದು ಕೊರತೆಗಳ ಅಹವಾಲುಅನ್ನು ಸ್ವೀಕರಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು ಮೈಸೂರಿನ ಹಂಚ್ಯಾ ಗ್ರಾಮ, ರಮ್ಮನಹಳ್ಳಿ ಗ್ರಾಮ, ಕಾಮನಕೆರೆ ಹಾಗೂ ಹಳೆ ಕೆಸರೆ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ವೇಳೆ ಭೇಟಿ ನೀಡಿದ ಗ್ರಾಮದ ಸಾರ್ವಜನಿಕರೊಂದಿಗೆ ಸಭೆ ನಡೆಸಿˌ ಅವರ ಕುಂದು ಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಲಾಯಿತು. ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಾಯಿತು. ಇದೇ ವೇಳೆ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಹಾಗೂ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಗ್ರಾಮಗಳ ಅಭಿವೃದ್ದಿಗೆ ಕೈಗೊಳ್ಳಲಾಗಿರುವ ಕಾರ್ಯಗಳ ಕುರಿತು ಗ್ರಾಮಸ್ಥರಿಗೆ ವಿವರಿಸಲಾಯಿತು ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ನಾಯಕ ಕವೀಶ್ ಗೌಡ, ಪ್ರಧಾನ ಕಾರ್ಯದರ್ಶಿ ಬಿ. ಎಂ. ರಘು ಸೇರಿದಂತೆ ಅನೇಕ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…