ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಜನರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಿಹಿಸುದ್ದಿಯೊಂದನ್ನು ನೀಡಿದ್ದಾರೆ.
ಈ ಸಂತೋಷದ ವಿಷಯವನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು NH-275ರ ಬೆಂಗಳೂರು-ಮೈಸೂರು ವಿಭಾಗದಲ್ಲಿ ವರ್ಧಿತ ರಸ್ತೆ ಬಳಕೆದಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹೆಚ್ಚುವರಿ ಕಾಮಗಾರಿಗಳಿಗಾಗಿ ಸಲ್ಲಿಸಿದ ಪ್ರಸ್ತಾವನೆಗಳನ್ನು ಅನುಮೋದಿಸಿದ್ದಾರೆ.
ಜಂಕ್ಷನ್ ಅಭಿವೃದ್ಧಿ: ಮೈಸೂರು ರಿಂಗ್ ರಸ್ತೆ ಮತ್ತು ಬೆಂಗಳೂರು-ಮೈಸೂರು ಹೆದ್ದಾರಿ ನಡುವೆ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಮೇಲ್ಸೇತುವೆ ನಿರ್ಮಾಣ.
ವರ್ಧಿತ ಸಂಚಾರ ನಿಯಂತ್ರಣ: ಟೋಲ್ ಬೂತ್‌ಗಳೊಂದಿಗೆ ಪ್ರಮಾಣಿತ ಪ್ರವೇಶ ಹಾಗೂ ನಿರ್ಗಮನ ನಿಬಂಧನೆಗಳ ಸ್ಥಾಪನೆ, ವಿವಿಧ ಸ್ಥಳಗಳಿಗೆ ತಡೆರಹಿತ ಸಂಚಾರ ಚಲನೆಯನ್ನು ಖಚಿತಪಡಿಸುವುದು ಮತ್ತು ಸ್ಥಳೀಯ ಚಲನಶೀಲತೆ ಮತ್ತು ಸಂಪರ್ಕವನ್ನು ಸುಧಾರಿಸಲು ಸೇವಾ ರಸ್ತೆಗಳ ನಿರ್ಮಾಣಕ್ಕೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ ಅನುಮೋದಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಂಸದ ಯದುವೀರ್ ಒಡೆಯರ್ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…