ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ವಿಶ್ವ ದರ್ಜೆಯ ಉತ್ಕೃಷ್ಟ ಮಟ್ಟದ ತಾರಾಲಯದ ಸ್ಥಳಕ್ಕೆ ಇಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿˌ ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿದರು.
ಈ ವೇಳೆ ತ್ವರಿತ ಗತಿಯಲ್ಲಿ ಹಾಗೂ ಅಚ್ಚುಕಟ್ಟಾಗಿ ಕಾಮಗಾರಿ ಮುಗಿಸುವಂತೆ ಅಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಮ್.ರಾಘು ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಇನ್ನು ಈ ಮಹತ್ವಾಕಾಂಕ್ಷೆಯ ಉಪಕ್ರಮವು ಖಗೋಳ ಸಂಶೋಧನೆ ಮತ್ತು ಸಾರ್ವಜನಿಕ ಶಿಕ್ಷಣಕ್ಕೆ ಮಹತ್ವದ ಕೇಂದ್ರವಾಗಿ ಕಾರ್ಯನಿರ್ವಹಿಸುವ ಅತ್ಯಾಧುನಿಕ ಸೌಲಭ್ಯವನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ. ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಪ್ರಗತಿಯ ಕೇಂದ್ರವಾಗಿ ಮೈಸೂರಿನ ಖ್ಯಾತಿಯನ್ನು ಹೆಚ್ಚಿಸಲು ಇದು ಸಹಾಯಕಾರಿಯಾಗಲಿದೆ ಎನ್ನಲಾಗುತ್ತಿದೆ.