ಮೈಸೂರು: ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಸದಾ ಬದ್ಧನಾಗಿದ್ದೇನೆ. ಕಡಿಮೆ ಪ್ರಮಾಣ ಬೆಳೆಯುವ ರೈತರ ಮೇಲೆ ಯಾವುದೇ ದಂಡ ವಿಧಿಸದಂತೆ ತಂಬಾಕು ಮಂಡಳಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಯದುವೀರ್ ಅವರು, ಈ ವಿಷಯದ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಎಂದು ವಿವರಿಸಿದ್ದಾರೆ.
ತಂಬಾಕು ಮಂಡಳಿಯ ಕಾರ್ಯಕಾರಿ ನಿರ್ದೇಶಕರ ಜೊತೆ ಮಾತನಾಡಿದ್ದು, ಪರವಾನಗಿ ಪಡೆದ ರೈತರು ಒಂದು ವೇಳೆ ಕಡಿಮೆ ಪ್ರಮಾಣದಲ್ಲಿ ಬೆಳೆದರೆ ಅಂತಹವರ ಮೇಲೆ ದಂಡ ವಿಧಿಸಬಾರದು ಎಂದು ತಿಳಿಸಲಾಗಿದೆ ಎಂದು ಹೇಳಿದ್ದಾರೆ.
ಈ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಪರಿಶೀಲನೆ ಮಾಡಿ ಸೂಕ್ತ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ನಮ್ಮ ಕ್ಷೇತ್ರದಲ್ಲಿ ತಂಬಾಕು ಬೆಳೆಗಾರರ ಸಂಖ್ಯೆ ಹೆಚ್ಚಾಗಿದೆ. ಇವರ ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದ ಕೂಡಲೇ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ತಂಬಾಕು ಬೆಳೆಗಾರರ ಕಷ್ಟ-ನಷ್ಟಗಳ ಬಗ್ಗೆ ಅರಿವಿದೆ. ಕೆಲವೊಮ್ಮೆ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಬೆಳೆಯುವ ಸಾಧ್ಯತೆಗಳಿರುತ್ತದೆ. ಇಂಥವರ ಮೇಲೆ ದಂಡ ವಿಧಿಸಲು ಅಧಿಕಾರಿಗಳು ಮುಂದಾಗಿದ್ದರು ಎಂದು ಸಂಸದರು ತಿಳಿಸಿದ್ದಾರೆ.
ಹೆಚ್ಚುವರಿ ದಂಡ ವಿಧಿಸುವುದರಿಂದ ನಮಗೆ ತೊಂದರೆ ಆಗುತ್ತಿದೆ ಎಂದು ರೈತರು ಸಮಸ್ಯೆ ತೋಡಿಕೊಂಡರು. ಕೂಡಲೇ ತಂಬಾಕು ಮಂಡಳಿ ಕಾರ್ಯಕಾರಿ ನಿರ್ದೇಶಕರೊಂದಿಗೆ ಚರ್ಚಿಸಿ ದಂಡ ವಿಧಿಸುವ ನಿರ್ಧಾರ ಕೈ ಬಿಡುವಂತೆ ತಿಳಿಸಿದ್ದೇನೆ ಎಂದಿದ್ದಾರೆ.
ತಂಬಾಕು ಮಂಡಳಿ ವತಿಯಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ. ನಮ್ಮ ರೈತರಿಗೆ ಅನುಕೂಲವಾದರೆ ಸಾಕು ಎಂದು ಸಂಸದ ಯದುವೀರ್ ಒಡೆಯರ್ ಸ್ಪಷ್ಟಪಡಿಸಿದ್ದಾರೆ.
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…