ಮೈಸೂರು ನಗರ

ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆ| ಜೂನ್‌ 2027ರೊಳಗೆ ಪೂರ್ಣಗೊಳ್ಳಲಿದೆ: ಸಂಸದ ಯದುವೀರ್‌

ಮೈಸೂರು: ಜೂನ್‌ 2027ರೊಳಗೆ ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆ ಪೂರ್ಣಗೊಳ್ಳಲಿದ್ದು, ಇದೀಗ ಕಾಮಗಾರಿಯೂ ಸ್ಥಿರ ಪ್ರಗತಿಯಲ್ಲಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಜೂನ್ 2027 ರೊಳಗೆ ಪೂರ್ಣಗೊಳ್ಳಲು ನಿರ್ಧರಿಸಲಾಗಿರುವ ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆಯ ಕಾಮಗಾರಿಯು ಇದೀಗ ಸ್ಥಿರ ಪ್ರಗತಿಯಲ್ಲಿದೆ. ಈ ಹೆದ್ದಾರಿಯೂ 92.3 ಕಿ.ಮೀ.ಗಳಷ್ಟು ವಿಸ್ತಾರವಾದ ಈ ನಾಲ್ಕು ಪಥದ ಪ್ರವೇಶ-ನಿಯಂತ್ರಿತ ಹೆದ್ದಾರಿಯಾಗಿದೆ. ಅಲ್ಲದೇ ಮೈಸೂರು ಮತ್ತು ಕುಶಾಲನಗರದ ಪ್ರಯಾಣದ ಸಮಯವನ್ನು ಕನಿಷ್ಠ 1-1.5 ಗಂಟೆಗಳಿಗೆ ಕಡಿತಗೊಳಿಸಲಿದೆ. ಇನ್ನೂ ಬೆಂಗಳೂರಿನಿಂದ ಕುಶಾಲನಗರದವರೆಗೆ ಪ್ರಯಾಣಿಸಲು ಕೇವಲ 3-3.5ಗಂಟೆಗಳ ಸಮಯ ತಗಲುವಂತೆ ಮಾಡುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಂಜೂರು ಮಾಡಿದ 4,129 ಕೋಟಿ ರೂ. ಬಜೆಟ್‌ನೊಂದಿಗೆ ಈ ಯೋಜನೆಯು ಈಗಾಗಲೇ ಗಣನೀಯವಾದ ಪ್ರಗತಿ ಕಾಣುತ್ತಿದೆ. ಇದರಲ್ಲಿ ಹೆಚ್ಚಿನ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅರಣ್ಯ ಪ್ರದೇಶದ ತೆರುವಿಗೆ ಅನುಮತಿಯೂ ಸಹ ದೊರೆತಿದೆ ಎಂದು ಹೇಳಿದ್ದಾರೆ.

ಈ ಬಹುನಿರೀಕ್ಷಿತ ಯೋಜನೆಯು ಪೂರ್ಣಗೊಂಡ ನಂತರ ಮೈಸೂರು ಮತ್ತು ಕೊಡಗಿನಲ್ಲಿ ಹೆದ್ದಾರಿ ಸಂಪರ್ಕ ಸುಧಾರಣೆಗೊಳ್ಳುವುದರ ಜೊತೆಗೆ ಆರ್ಥಿಕ ಬೆಳವಣಿಗೆಗೆ ವೇಗ ನೀಡುತ್ತದೆ. ಅಲ್ಲದೇ ವ್ಯಾಪಾರ ಮತ್ತು ಹೂಡಿಕೆಗಳನ್ನು ಆಕರ್ಷಿಸಲುˌ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಸ್ಥಳೀಯ ವ್ಯವಹಾರಗಳಿಗೆ ಅವಕಾಶಗಳನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ. ಈ ಯೋಜನೆಯಿಂದಾಗಿ ನಮ್ಮ ಪ್ರದೇಶಕ್ಕೆ ಗರಿಷ್ಠ ಮಟ್ಟದ ಪ್ರಯೋಜನಗಳು ದೊರೆಯಲಿವೆ ಎಂದು ತಿಳಿಸಲು ಹರ್ಷಿಸುತ್ತೇನೆ. ನಿಮ್ಮ ಪ್ರತಿನಿಧಿಯಾಗಿ ಕ್ಷೇತ್ರದ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ದಿಗೆ ಬದ್ಧನಾಗಿ ನನ್ನ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

20 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

20 hours ago