ಮೈಸೂರು ನಗರ

ಆಷಾಢ ಮಾಸದ ಮೊದಲ ಶುಕ್ರವಾರದ ವಿಶೇಷ ಪೂಜೆಯಲ್ಲಿ ಯದುವೀರ್ ಒಡೆಯರ್ ಭಾಗಿ

ಮೈಸೂರು :ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಸಂಸದರಾದ ಬಳಿಕ ಮೊದಲ ಬಾರಿಗೆ ಚಾಮುಂಡಿಬೆಟ್ಟಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ನೀಡಿ, ಆಷಾಢ ಮಾಸದ ಮೊದಲ ಶುಕ್ರವಾರದ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದರು.

ಇನ್ನು ಮುಂಜಾನೆಯಿಂದಲೂ ಕೂಡ ತಾಯಿ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದ್ದು, ಬರುವ ಭಕ್ತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಜಿಲ್ಲಾಡಳಿತ ಕೂಡ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಬರುವಂತ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ, ಉಪಹಾರ, ಪ್ರಸಾದ, ವಾಹನಗಳ ನಿಲುಗಡೆ, ಶೌಚಾಲಯ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನ ಒದಗಿಸಲಾಗಿದೆ.

ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.  ಬೆಟ್ಟಕ್ಕೆ ಆಗಮಿಸುವ ಭಕ್ತರಿಗಾಗಿ ಲಲಿತಮಹಲ್‌ ಪ್ಯಾಲೇಸ್‌ ಬಳಿಯಿರುವ ಮೈದಾನದಿಂದ ಚಾಮುಂಡಿಬೆಟ್ಟಕ್ಕೆ ಉಚಿತ ಬಸ್‌  ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ಕೇವಲ ಶುಕ್ರವಾರ ಮಾತ್ರ ಉಚಿತ ಬಸ್‌ ವ್ಯವಸ್ಥೆ ಮಾಡಲಾಗಿದೆ. ಇನ್ನು ಚಾಮುಂಡೆಶ್ವರಿ ದೇವಿ ದರ್ಶನಕ್ಕೆ ಪಾಸ್‌ ವ್ಯವಸ್ಥೆ ರದ್ದು ಮಾಡಲಾಗಿದೆ. ಜನರು ಸರತಿ ಸಾಲಿನಲ್ಲಿ ದೇಗುಲ ಪ್ರವೇಶಿಸಲು ಬ್ಯಾರಿಕೇಡ್‌ ಅಳವಡಿಸಲಾಗಿದೆ. ಅಲ್ದೆ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮಾರಾ ಕೂಡ ಅಳವಡಿಸಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…

8 mins ago

ಜನವರಿ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ

ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…

11 mins ago

ಗ್ರಾಮೀಣ ಭಾಗದಲ್ಲಿ ಚಳಿಗೆ ತತ್ತರಿಸಿದ ಜನರು

ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ  ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…

20 mins ago

ಒಂದೇ ವರ್ಷದಲ್ಲಿ ಕಿತ್ತು ಬಂದ ರಸ್ತೆಯ ಜಲ್ಲಿ ಕಲ್ಲು!

ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…

23 mins ago

ನಿರಂತರ ಹುಲಿ, ಚಿರತೆಗಳ ಹಾವಳಿ; ಕಂಗಾಲಾದ ರೈತರು

ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…

27 mins ago