Mysore
26
scattered clouds

Social Media

ಮಂಗಳವಾರ, 16 ಜೂನ್ 2026
Light
Dark

ಮೈಸೂರು| ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಒಡೆಯರ್‌ ದಿಢೀರ್‌ ಭೇಟಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ನಿನ್ನೆ ನವಜಾತ ಶಿಶುವೊಂದು ಸಾವನ್ನಪ್ಪಿತ್ತು. ಶಿಶು ಸಾವನ್ನಪ್ಪುತ್ತಿದ್ದಂತೆ ಪೋಷಕರು ಆಸ್ಪತ್ರೆ ವೈದ್ಯರ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಇರುವೆ ಕಚ್ಚಿ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ ಇಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ಐಸಿಯುಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂಸದರು, ಆಸ್ಪತ್ರೆಯ ಆವರಣವನ್ನು ಸಹ ವೀಕ್ಷಿಸಿದರು.

ಘಟನೆಯ ಬಗ್ಗೆ ವೈದ್ಯಧಿಕಾರಿಗಳ ಬಳಿ ಮಾಹಿತಿ ಪಡೆದ ಬಳಿಕ ಆಸ್ಪತ್ರೆಯಲ್ಲಿದ್ದ ಜನರ ಸಮಸ್ಯೆಯನ್ನು ಆಲಿಸಿದರು. ಆಸ್ಪತ್ರೆಯಲ್ಲಿ ಏನೆಲ್ಲಾ ಸಮಸ್ಯೆಗಳಿದೆ. ಯಾವ ಅನುಕೂಲಗಳು ಬೇಕಾಗಿದೆ. ಈ ಬಗ್ಗೆ ಪಟ್ಟಿ ಮಾಡಿಕೊಡಿ ಎಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಆಸ್ಪತ್ರೆಯಲ್ಲಿ ರೋಗಿಗಳಿಗೆ ಕುಡಿಯುವ ಬಿಸಿನೀರಿನ ಸಮಸ್ಯೆ ಇದೆ ಎಂದು ರೋಗಿಗಳು ಅಳಲು ತೋಡಿಕೊಂಡರು. ಈ ವೇಳೆ ಕೇವಲ 10 ನಿಮಿಷದಲ್ಲೇ ಹೊಸದಾದ ಬಿಸಿನೀರಿನ ಯಂತ್ರ ಉಡುಗೊರೆ ನೀಡಿದ ಸಂಸದರು ರೋಗಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಕೆಲಸ ಮಾಡಿ ಎಂದು ಆಸ್ಪತ್ರೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

Tags:
error: Content is protected !!