ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ನಿನ್ನೆ ನವಜಾತ ಶಿಶುವೊಂದು ಸಾವನ್ನಪ್ಪಿತ್ತು. ಶಿಶು ಸಾವನ್ನಪ್ಪುತ್ತಿದ್ದಂತೆ ಪೋಷಕರು ಆಸ್ಪತ್ರೆ ವೈದ್ಯರ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಇರುವೆ ಕಚ್ಚಿ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿದ್ದರು.
ಈ ಎಲ್ಲಾ ಬೆಳವಣಿಗೆಗಳ ನಡುವೆ ಇಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ಐಸಿಯುಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂಸದರು, ಆಸ್ಪತ್ರೆಯ ಆವರಣವನ್ನು ಸಹ ವೀಕ್ಷಿಸಿದರು.
ಘಟನೆಯ ಬಗ್ಗೆ ವೈದ್ಯಧಿಕಾರಿಗಳ ಬಳಿ ಮಾಹಿತಿ ಪಡೆದ ಬಳಿಕ ಆಸ್ಪತ್ರೆಯಲ್ಲಿದ್ದ ಜನರ ಸಮಸ್ಯೆಯನ್ನು ಆಲಿಸಿದರು. ಆಸ್ಪತ್ರೆಯಲ್ಲಿ ಏನೆಲ್ಲಾ ಸಮಸ್ಯೆಗಳಿದೆ. ಯಾವ ಅನುಕೂಲಗಳು ಬೇಕಾಗಿದೆ. ಈ ಬಗ್ಗೆ ಪಟ್ಟಿ ಮಾಡಿಕೊಡಿ ಎಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಆಸ್ಪತ್ರೆಯಲ್ಲಿ ರೋಗಿಗಳಿಗೆ ಕುಡಿಯುವ ಬಿಸಿನೀರಿನ ಸಮಸ್ಯೆ ಇದೆ ಎಂದು ರೋಗಿಗಳು ಅಳಲು ತೋಡಿಕೊಂಡರು. ಈ ವೇಳೆ ಕೇವಲ 10 ನಿಮಿಷದಲ್ಲೇ ಹೊಸದಾದ ಬಿಸಿನೀರಿನ ಯಂತ್ರ ಉಡುಗೊರೆ ನೀಡಿದ ಸಂಸದರು ರೋಗಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಕೆಲಸ ಮಾಡಿ ಎಂದು ಆಸ್ಪತ್ರೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…