Mysore
28
scattered clouds

Social Media

ಶುಕ್ರವಾರ, 10 ಜನವರಿ 2025
Light
Dark

ಮೈಸೂರಿನ ವಿವಿಧ ಗ್ರಾಮಗಳಿಗೆ ಸಂಸದ ಯದುವೀರ್‌ ಒಡೆಯರ್ ಭೇಟಿ: ಸಾರ್ವಜನಿಕರ ಅಹವಾಲು ಸ್ವೀಕಾರ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಮೈಸೂರಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು.

ಹಂಚ್ಯಾ, ರಮ್ಮನಹಳ್ಳಿ, ಕಾಮನಕೆರೆಹುಂಡಿ, ಹಳೆ ಕೆಸರೆ ಗ್ರಾಮ, ಕೆ.ಆರ್.ಮಿಲ್ ಕಾಲೋನಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಅವರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದ ಸಂಸದರು, ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಗ್ರಾಮಗಳ ಅಭಿವೃದ್ಧಿಗೆ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ಗ್ರಾಮಸ್ಥರಿಗೆ ವಿವರಣೆ ನೀಡಿದರು. ಇದೇ ವೇಳೆ ಕೃಷಿ, ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಟಿಬದ್ಧವಾಗಿ ಶ್ರಮಿಸುತ್ತಿದೆ. ಅವರ ಆಶಯದಂತೆ ಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಮತ್ತು ಸುಸ್ಥಿರ ಸಮಾಜದ ನಿರ್ಮಾಣಕ್ಕೆ ನಾವು ಬದ್ಧರಾಗಿ ದುಡಿಯಲಿದ್ದೇವೆ ಎಂದು ತಿಳಿಸಿದರು.

ಈ ವೇಳೆ ಬಿಜೆಪಿ ನಾಯಕ ಕವೀಶ್ ಗೌಡ, ಪ್ರಧಾನ ಕಾರ್ಯದರ್ಶಿ ಬಿ.ಎಂ.ರಘು ಸೇರಿದಂತೆ ಅನೇಕ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Tags: