ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಮೈಸೂರಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು.
ಹಂಚ್ಯಾ, ರಮ್ಮನಹಳ್ಳಿ, ಕಾಮನಕೆರೆಹುಂಡಿ, ಹಳೆ ಕೆಸರೆ ಗ್ರಾಮ, ಕೆ.ಆರ್.ಮಿಲ್ ಕಾಲೋನಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಅವರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದ ಸಂಸದರು, ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಗ್ರಾಮಗಳ ಅಭಿವೃದ್ಧಿಗೆ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ಗ್ರಾಮಸ್ಥರಿಗೆ ವಿವರಣೆ ನೀಡಿದರು. ಇದೇ ವೇಳೆ ಕೃಷಿ, ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಟಿಬದ್ಧವಾಗಿ ಶ್ರಮಿಸುತ್ತಿದೆ. ಅವರ ಆಶಯದಂತೆ ಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಮತ್ತು ಸುಸ್ಥಿರ ಸಮಾಜದ ನಿರ್ಮಾಣಕ್ಕೆ ನಾವು ಬದ್ಧರಾಗಿ ದುಡಿಯಲಿದ್ದೇವೆ ಎಂದು ತಿಳಿಸಿದರು.
ಈ ವೇಳೆ ಬಿಜೆಪಿ ನಾಯಕ ಕವೀಶ್ ಗೌಡ, ಪ್ರಧಾನ ಕಾರ್ಯದರ್ಶಿ ಬಿ.ಎಂ.ರಘು ಸೇರಿದಂತೆ ಅನೇಕ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…
ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ…
ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…
ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…