ಮೈಸೂರು ನಗರ

ಚಾಮುಂಡಿಬೆಟ್ಟಕ್ಕೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ ಇಂದು ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ನೀಡಿ ತಾಯಿಯ ದರ್ಶನ ಪಡೆದರು.

ಆಷಾಡ ಮಾಸದ ದರ್ಶನದಲ್ಲಿ ಅವ್ಯವಸ್ಥೆ ಎಂಬ ವಿಚಾರ ಕೇಳಿ ಬಂದ ಹಿನ್ನೆಲೆಯಲ್ಲಿ ಖುದ್ದು ಬೆಟ್ಟಕ್ಕೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌ ಅವರು, ಬೆಟ್ಟದಲ್ಲಿ ಕಲ್ಪಿಸಿರುವ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು. ಪ್ರಾಧಿಕಾರದ ಕಾರ್ಯದರ್ಶಿ ರೂಪರೊಡಗೂಡಿ 2000 ಟಿಕೆಟ್, 300ರೂ ಟಿಕೆಟ್ ಹಾಗೂ ಸಾಮಾನ್ಯ ದರ್ಶನ ಭಾಗದಲ್ಲಿ ವೀಕ್ಷಣೆ ನಡೆಸಿ, ಅವ್ಯವಸ್ಥೆ ಸರಿಪಡಿಸುವಂತೆ ಸೂಚನೆ ನೀಡಿದರು.

ಇದೇ ವೇಳೆ ಮಾತನಾಡಿದ ಸಂಸದರು, ಬೆಟ್ಟದಲ್ಲಿ ಭಕ್ತಾಧಿಗಳಿಗೆ ಅವ್ಯವಸ್ಥೆ ಆಗಿದೆ ಎಂದು ದೂರು ಕೇಳಿ ಬಂದಿತ್ತು. ಅದರ ಪ್ರಯುಕ್ತ ಇಂದು ನಾನು ಒಬ್ಬ ಜನಪ್ರತಿನಿಧಿಯಾಗಿ ಭೇಟಿ ಮಾಡಿದ್ದೇನೆ. ಎಲ್ಲವನ್ನು ವೀಕ್ಷಣೆ ಮಾಡಿದ್ದೇನೆ. ಅಧಿಕಾರಿಗಳಿಗೂ ಸೂಚನೆ ನೋಡಿದ್ದೇನೆ. ದರ್ಶನ ಸಂದರ್ಭದಲ್ಲಿ ಸರಿಯಾಗಿ ವ್ಯವಸ್ಥೆ ಮಾಡಿಲ್ಲ. ಧರ್ಮ ದರ್ಶನ, ಟಿಕೆಟ್ ಪಡೆದು ಹೋಗುವವರು ಎಲ್ಲರಿಗೂ ಒಂದು ಕಡೆ ಬಂದು ಸೇರಿ ಸಾಕಷ್ಟು ಗೊಂದಲ ಉಂಟಾಗುತ್ತಿದೆ ಮತ್ತು ಪ್ರಸಾದ ವಿತರಣೆಯಲ್ಲೂ ಸರಿಯಾಗಿ ವಿತರಣೆ ಮಾಡುತ್ತಿಲ್ಲ ಎಂಬ ದೂರು ಕೇಳಿ ಬಂದಿತ್ತು. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಮುಂದೆ ಇಂತಹ ಸಮಸ್ಯೆ ಮರುಕಳಿಸದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು.

ಇನ್ನು 2000 ಟಿಕೆಟ್‌ನಿಂದ ಭಕ್ತರಿಗೆ ತೊಂದರೆ ಆಗುತ್ತದೆ ಎನ್ನುವ ಮಾತುಗಳು ಕೇಳಿ ಬಂದಿದೆ. ಸರ್ಕಾರ ಇದನ್ನು ಮತ್ತೊಮ್ಮೆ ಪರಿಶೀಲಿಸಬೇಕು. 2000 ತುಂಬಾ ದುಬಾರಿಯಾಯಿತು ಎಂದು ಜಿಲ್ಲಾಡಳಿತದ ವಿರುದ್ಧ ಕಿಡಿಕಾರಿದರು.

ಇನ್ನು ಚಾಮುಂಡಿಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲು ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು. ಇದರಿಂದ ಬರುವ ಭಕ್ತರಿಗೂ ಸಮಸ್ಯೆ ಆಗಬಾರದು. ತಿರುಪತಿ ಮಾದರಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್ ನಿರ್ಬಂಧ ಮಾಡಬೇಕು. ಇತ್ತೀಚೆಗೆ ಕೆಲವರು ಗೊತ್ತಿದ್ದೋ ಗೊತ್ತಿಲ್ಲದೆಯೋ ದೇವಿಯ ಮೂಲ ವಿಗ್ರಹದ ವಿಡಿಯೋ ಮಾಡುತ್ತಿದ್ದಾರೆ. ಇದು ಧಾರ್ಮಿಕ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುತ್ತದೆ. ಹಾಗಾಗಿ ಈ ನಿಟ್ಟಿನಲ್ಲಿ ಸೂಕ್ತ ಕಾನೂನನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

13 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

13 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

14 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

14 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

14 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

15 hours ago