ಮೈಸೂರು: ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಸಿ.ಎಚ್.ವಿಜಯಶಂಕರ್ ಅವರನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಭಿನಂದಿಸಿದ್ದಾರೆ.
ಮಾಜಿ ಸಂಸದ ಹಾಗೂ ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಅವರನ್ನು ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದೇಶ ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ಇವರನ್ನು ನೇಮಕ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಸಿ.ಎಚ್.ವಿಜಯಶಂಕರ್‌ಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದ್ದು, ಗಣ್ಯಾತಿಗಣ್ಯರು ವಿಜಯಶಂಕರ್ ಅವರ ನಿವಾಸಕ್ಕೆ ಆಗಮಿಸಿ ಶುಭ ಕೋರುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿ.ಎಚ್.ವಿಜಯಶಂಕರ್‌ರನ್ನು ಭೇಟಿ ಮಾಡಿದ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ವಿಜಯಶಂಕರ್ ಅವರಿಗೆ ಶಾಲು ಹಾರ ಹಾಕಿ ಹೂಗುಚ್ಛ ನೀಡಿ ಶುಭ ಹಾರೈಸಿದರು.