ಮೈಸೂರು: ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಜ್ಜ ಮದನ್ ಗೋಪಾಲ್ ರಾಜ್ ಅರಸ್ ಅವರಿಂದು ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.
ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಗೋಪಾಲ್ ರಾಜ್ ಅರಸ್ ಅವರು ಇಂದು ನಿಧನರಾಗಿದ್ದಾರೆ.
ಅವರ ಅಂತ್ಯಕ್ರಿಯೆ ಇಂದು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ನೆರವೇರಿದೆ.
ಅಜ್ಜ ಮದನ್ ಗೋಪಾಲ್ ಅರಸ್ ಅವರ ನಿಧನಕ್ಕೆ ಸಂಸದ ಯದುವೀರ್ ಒಡೆಯರ್ ಅವರು ತೀವ್ರ ಸಂತಾಪ ಸೂಚಿಸಿದ್ದು, ಇಂದು ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ.





