ಮೈಸೂರು: ಮುಡಾ ಹಗರಣದಲ್ಲಿ 14 ಬದಲಿ ನಿವೇಶನಗಳನ್ನು ಪಡೆದಿದ್ದ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು, ತಮ್ಮ 14 ಸೈಟ್‌ಗಳನ್ನು ವಾಪಸ್ ನೀಡುವುದಾಗಿ ಮುಡಾಗೆ ಪತ್ರ ಬರೆದಿದ್ದರು. ಇದನ್ನು ಮುಡಾ 24 ಗಂಟೆಯೊಳಗೆ ಸ್ವೀಕರಿಸಿದ್ದಲ್ಲದೇ ಪತ್ರವನ್ನು ಅಂಗೀಕರಿಸಿ ಇ.ಡಿ ನಿವೇಶನವನ್ನು ವಶಕ್ಕೆ ಪಡೆಯುವ ಮೊದಲೇ ಖಾತೆ ರದ್ದುಗೊಳಿಸಿದೆ.
ಮುಡಾ ಹಗರಣ ಇಡೀ ರಾಜ್ಯದಲ್ಲೇ ಕಳೆದ 3 ತಿಂಗಳಿನಿಂದ ಸದ್ದು ಮಾಡುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಲ್ಲದೇ, ಜನಪ್ರತಿನಿಧಿಗಳ ನ್ಯಾಯಾಲಯದಿಂದ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿದೆ. ಇದರ ಬೆನ್ನಲ್ಲೇ ನಿನ್ನೆ ಇ.ಡಿ.ಯಲ್ಲಿ ಇಸಿಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಸಿಎಂ ಪತ್ನಿ ಪಾರ್ವತಿ ಅವರು, ತಮ್ಮ ಬಳಿಯಿರುವ ನಿವೇಶನಗಳನ್ನು ವಶಪಡಿಸಿಕೊಳ್ಳುವಂತೆ ಮುಡಾಗೆ ಪತ್ರ ಬರೆದಿದ್ದರು.
ಈ ಪತ್ರವನ್ನು 24 ಗಂಟೆಯೊಳಗೆ ಅಂಗೀಕರಿಸಿದ ಮುಡಾ ಆಯುಕ್ತ ರಘುನಂದನ್ ಅವರು, ಇ.ಡಿ. ಅಧಿಕಾರಿಗಳು ನಿವೇಶನವನ್ನು ತಮ್ಮ ಸ್ವಾಧೀನಕ್ಕೆ ಪಡೆಯುವ ಮೊದಲೇ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ 14 ಬದಲಿ ನಿವೇಶನಗಳ ಖಾತೆಯನ್ನು ರದ್ದುಗೊಳಿಸಿದ್ದಾರೆ.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…