ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ 20ಕ್ಕೂ ಅಧಿಕ ಅಧಿಕಾರಿಗಳು ಇಂದು(ಅಕ್ಟೋಬರ್.18) ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುಂತೆ ಇ.ಡಿ.ಯೂ ಸಮನ್ಸ್ ನೀಡಿತ್ತು. ಈ ಸಮನ್ಸ್ ಅನ್ವಯ ಸ್ನೇಹಮಯಿ ಕೃಷ್ಣ ಅವರು ಕೃಷ್ಣ ಶಾಂತಿನಗರದ ಇ.ಡಿ.ಕಚೇರಿಯಲ್ಲಿ ವಿಚಾರಣೆಯನ್ನು ಎದುರಿಸಿದ್ದರು. ಈ ವೇಳೆ ಇ.ಡಿ.ಅಧಿಕಾರಿಗಳಿಗೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ 500 ಪುಟಗಳ ದಾಖಲೆಗಳನ್ನು ಸಹ ನೀಡಿದ್ದರು.
ಸ್ನೇಹಮಯಿ ಕೃಷ್ಣ ಅವರು ನೀಡಿದ ದಾಖಲೆಗಳನ್ನು ಇ.ಡಿ.ಅಧಿಕಾರಿಗಳು ತನಿಖೆ ನಡೆಸಿ ಇಸಿಐಆರ್ ದಾಖಲಿಸಿದ್ದರು. ಅಲ್ಲದೇ, ಈ ದಾಖಲೆಗಳ ಆಧಾರದ ಮೇಲೆ ಹೆಚ್ಚಿನ ತನಿಖೆಗಾಗಿ ಇಂದು ಮುಡಾ ಕಚೇರಿ ಹಾಗೂ ಭೂ ಮಾಲೀಕ ದೇವರಾಜು ಅವರ ಬೆಂಗಳೂರಿನ ಕೆಂಗೇರಿ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…
ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…
ವಾಷಿಂಗ್ಟನ್: ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್,…
ವಾಷಿಂಗ್ಟನ್: ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ದೇಶವನ್ನು…