ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಇಂದು ( ಸೆಪ್ಟೆಂಬರ್ 24 ) ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ನಡೆಸಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್‌ಶಾಕ್ ನೀಡಿದೆ.
ಈ ವಿಚಾರವಾಗಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯಪಾಲರ ಆದೇಶದಲ್ಲಿ ಯಾವುದೇ ತಪ್ಪಿಲ್ಲ, ರಾಜ್ಯಪಾಲರು ತರಾತುರಿಯಲ್ಲಿ ನಿರ್ಧಾರ ಕೈಗೊಂಡಿಲ್ಲ. ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಲಾಭವಾಗಿದೆ ಹೀಗಾಗಿ ತನಿಖೆ ಅಗತ್ಯ ಎಂದು ಹೈಕೋರ್ಟ್ ಸೂಚಿಸಿದೆ. 17 ಎ ಅಡಿಯಲ್ಲಿ ಮಾತ್ರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದ್ದು, ಬಿಎನ್‌ಎಸ್‌ಎಸ್ ಸೆಕ್ಷನ್ 218ರ ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿಸಿಲ್ಲ.