ಮೈಸೂರು: ಸತ್ಯಮೇವ ಜಯತೇ. ಸತ್ಯ,ಕಾನೂನಿಗೆ ಜಯ ದೊರೆಯಲಿದೆ ಎನ್ನುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಪ್ರಕರಣವೇ ನಿದರ್ಶನವಾಗಿದೆ. ಸಿದ್ದರಾಮಯ್ಯ ಅವರು ಗೌರವದಿಂದ ರಾಜೀನಾಮೆ ಕೊಡುತ್ತಾರೆ ಎನ್ನುವ ನಿರೀಕ್ಷೆ ಇದೆ. ಕೊಡದೆ ಇದ್ದರೂ ಹೈಕಮಾಂಡ್ ಪಡೆಯುತ್ತದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ಮೊದಲು ರಾಜೀನಾಮೆ ಪಡೆಯಲಿ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.
ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷ. ರಾಹುಲ್‌ಗಾಂಧಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ತಮ್ಮದೇ ಮುಖ್ಯಮಂತ್ರಿ ವಿರುದ್ಧ ಹೈಕೋರ್ಟ್ ತನಿಖೆ ನಡೆಸಲು ಒಪ್ಪಿರುವಾಗ ಯಾವ ರೀತಿ ರಾಜೀನಾಮೆ ಪಡೆಯದೆ ಇರುತ್ತಾರೆ ಎಂದು ಪ್ರಶ್ನಿಸಿದರು. ನಮಗೆ ದಾಖಲೆ ನೋಡಿಯೇ ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಗುತ್ತದೆ ಎನ್ನುವುದು ಗೊತ್ತಿತ್ತು. ಮೊದಲ ದಿನವೇ ನ್ಯಾಯಾಲಯ ತಿರಸ್ಕಾರ ಮಾಡಿದ್ದರೆ ಸರಿ ಇತ್ತು. ಆದರೆ ಎಲ್ಲವನ್ನು ಪರಿಶೀಲಿಸಿ ಅನುಮತಿ ನೀಡಿರುವುದರಿಂದ ಸತ್ಯವಿದೆ ಎನ್ನುವುದು ಜನರಿಗೂ ಗೊತ್ತಾಗಿದೆ ಎಂದರು. ಸಿಎಂ ರಾಜೀನಾಮೆ ಕೊಡದಿದ್ದರೆ ಏನು ಮಾಡಬೇಕು ಎಂಬುದನ್ನು ಚರ್ಚಿಸುತ್ತೇವೆ. ಬಿಜೆಪಿ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರ ಜತೆ ಚರ್ಚೆ ಮಾಡಿ ನಿರ್ಧರಿಸುತ್ತೇವೆ. ಸಿಎಂ ಅವರಲ್ಲಿ ನೈತಿಕತೆ ಎನ್ನುವುದು ಇದ್ದರೆ ಅಧಿಕಾರದಲ್ಲಿ ಮುಂದುವರಿಯಬಾರದು ಎಂದು ಸಲಹೆ ನೀಡಿದರು.
ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ…
ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…
ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…
ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ…
ನವೀನ್ ಡಿಸೋಜ ಖಾಸಗಿ ಸಹಭಾಗಿತ್ವದಲ್ಲಿ ಆರಂಭಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ; ಟ್ರಾಫಿಕ್ ಕಿರಿಕಿರಿಗೂ ಕಡಿವಾಣ ಮಡಿಕೇರಿ: ನಗರದ ರಾಜಾಸೀಟ್ ಆವರಣದಲ್ಲಿ…
ಮಂಜು ಕೋಟೆ ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ…