ಮೈಸೂರು: ಮೈಸೂರು ನಗರಾಭಿವೃದೀ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತ ದಿನೇಶ್ ಕುಮಾರ್ ಅವರ ತಲೆ ತಂಡವಾಗಿದೆ.
ಮುಡಾದಲ್ಲಿ 50:50 ಸೈಟು ಹಂಚಿಕೆ ವಿಚಾರದಲ್ಲಿ ಹಗರಣ ನಡೆದಿದೆ ಎಂದು ಬಜೆಪಿ ನಾಯಕರಿಂದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ಭೈರತಿ ಸುರೇಶ್ ಸೋಮವಾರ ಉನ್ನತಮಟ್ಟದ ಸಭೆ ನಡೆಸಿದ್ದಾರೆ.
ಬಳಿಕ ಮಾತನಾಡಿದ ಅವರು, ಮುಡಾ ಆಯುಕ್ತರನ್ನು ವರ್ಗಾವಣೆಗೊಳಿಸಿ ಮೌಖಿಕ ಆದೇಶ ಮಾಡಿರುವುದಾಗಿ ತಿಳಿಸಿದ್ದಾರೆ. ಜತೆಗೆ ಕಾರ್ಯದರ್ಶಿ, ಎಇಇ ಅವರನ್ನು ಕೂಡಾ ವರ್ಗಾವಣೆಗೊಳಿಸಲಾಗಿದೆ. ಇದು ಅಧಿಕಾರಿಗಳ ವಿರುದ್ಧದ ಕ್ರಮವಲ್ಲ ಬದಲಾಗಿ ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು.
ಇನ್ನು ಈ ಪ್ರಕರಣದ ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳಾದ ವೆಂಕಟಾಚಲಪತಿ, ಅವಳಗಿ ಹಾಗೂ ನಾಲ್ಕು ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮತ್ತು ಈ ಪ್ರಕರಣ ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ.
ಇನ್ನು ಈ ಪ್ರಕರಣ ಮುಗಿಯುವವರೆಗೆ ಮುಂದಿನ ಒಂದು ತಿಂಗಳು ಯಾವುದೇ ಸೈಟು ಹಂಚಿಕೆ ಮಾಡದಂತೆ ಭೈರತಿ ಸುರೇಶ್ ಸೂಚಿಸಿದ್ದಾರೆ. ಜತೆಗೆ ಬಿಜೆಪಿ ಅವಧಿಯಲ್ಲಿ ಹಂಚಿಕೆ ಮಾಡಲಾಗಿದ್ದ ಸೈಟುಗಳಿಗೆ ಸ್ಟೇ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…