Mysore
33
few clouds

Social Media

ಸೋಮವಾರ, 13 ಏಪ್ರಿಲ 2026
Light
Dark

ಮುಡಾ ಹಗರಣ ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಆಗ್ತಿದೆ ; ನೂತನ ಆಯುಕ್ತ ರಘುನಂದನ್

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಅಲ್ಲದೆ ಪ್ರತಿಪಕ್ಷ ಬಿಜೆಪಿ ಕೂಡ ಸಿಎಂ ಸಿದ್ದರಾಮಯ್ಯರನ್ನ ಗುರಿಯಾಗಿಸಿಕೊಂಡು ತೀವ್ರ ವಾಗ್ದಾಳಿ ನಡೆಸುವುದರ ಜೊತೆಗೆ ಸಿಎಂ ರಾಜೀನಾಮೆಗೂ ಆಗ್ರಹಿಸುತ್ತಿದೆ. ಇನ್ನು ಮುಡಾ ಹಗರಣ ವಿಚಾರಕ್ಕೆ ಸಂಬಂಧಪಟ್ಟಂತೆ ಮುಡಾ ನೂತನ ಆಯುಕ್ತ ರಘುನಂದನ್‌ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ಹಿರಿಯ ಐಎಎಸ್‌ ಅಧಿಕಾರಿಗಳಿಂದ ತನಿಖೆ ಆಗ್ತಿದೆ. ಅಧಿಕಾರಿಗಳು ಕೇಳಿದ ದಾಖಲೆ, ಮಾಹಿತಿ ನೀಡಲಾಗಿದೆ. ತನಿಖೆ ಮುಗಿಯುವವರೆಗೂ ಸಭೆ ನಡೆಸದಂತೆ ಸೂಚನೆ ನೀಡಲಾಗಿದೆ. ಹಾಗಾಗಿ ಯಾವುದೇ ಸಭೆ, ನಿರ್ಣಯ ಕೈಗೊಳ್ಳಲು ಆಗುತ್ತಿಲ್ಲ ಎಂದು ಹೇಳಿದರು.

Tags:
error: Content is protected !!