Mysore
29
clear sky

Social Media

ಮಂಗಳವಾರ, 21 ಜನವರಿ 2025
Light
Dark

ಮುಡಾ ಮಾಜಿ ಅಧ್ಯಕ್ಷ 848 ಸೈಟ್‌ ಪಡೆದ ವಿಚಾರ: ಸಚಿವ ಭೈರತಿ ಸುರೇಶ್‌ ಪ್ರತಿಕ್ರಿಯೆ

ಮೈಸೂರು: ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್‌ ಅವರು, ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆಯನ್ನು ಮಾಡಿಸಿಕೊಂಡಿದ್ದಾರೆ ಎನ್ನಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರು, ರಾಜೀವ್‌ ಅವರು ಒಂದೇ ದಿನ ಇಷ್ಟೊಂದು ನಿವೇಶನ ತೆಗೆದುಕೊಂಡಿರುವ ಬಗ್ಗೆ ನನಗೆ ಗೊತ್ತಿಲ್ಲ. ಮುಡಾ ಹಗರಣ ಸಂಬಂಧ ನ್ಯಾಯಮೂರ್ತಿ ದೇಸಾಯಿ ನೇತೃತ್ವದಲ್ಲಿ ತನಿಖೆಯಾಗುತ್ತಿದೆ. ವರದಿ ಬಂದ ತಕ್ಷಣ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರನ್ನು ರಕ್ಷಿಸುವ ಮಾತೇ ಇಲ್ಲ. ತಪ್ಪು ಮಾಡಿರುವವರ ವಿರುದ್ಧ ಕಾನೂನು ಕ್ರಮ ಆಗಲಿದೆ. ಎಚ್.ವಿ.ರಾಜೀವ್‌ ಅವರ ವಿಚಾರ ತಿಳಿದ ಮೇಲೆ ನಾನು ಪ್ರತಿಕ್ರಿಯೆ ನೀಡುತ್ತೇನೆ. ಅಲ್ಲಿಯವರೆಗೂ ಏನನ್ನೂ ಮಾತನಾಡಲ್ಲ ಎಂದರು.

 

 

 

Tags: