ಮೈಸೂರು: ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಅವರು, ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆಯನ್ನು ಮಾಡಿಸಿಕೊಂಡಿದ್ದಾರೆ ಎನ್ನಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು, ರಾಜೀವ್ ಅವರು ಒಂದೇ ದಿನ ಇಷ್ಟೊಂದು ನಿವೇಶನ ತೆಗೆದುಕೊಂಡಿರುವ ಬಗ್ಗೆ ನನಗೆ ಗೊತ್ತಿಲ್ಲ. ಮುಡಾ ಹಗರಣ ಸಂಬಂಧ ನ್ಯಾಯಮೂರ್ತಿ ದೇಸಾಯಿ ನೇತೃತ್ವದಲ್ಲಿ ತನಿಖೆಯಾಗುತ್ತಿದೆ. ವರದಿ ಬಂದ ತಕ್ಷಣ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರನ್ನು ರಕ್ಷಿಸುವ ಮಾತೇ ಇಲ್ಲ. ತಪ್ಪು ಮಾಡಿರುವವರ ವಿರುದ್ಧ ಕಾನೂನು ಕ್ರಮ ಆಗಲಿದೆ. ಎಚ್.ವಿ.ರಾಜೀವ್ ಅವರ ವಿಚಾರ ತಿಳಿದ ಮೇಲೆ ನಾನು ಪ್ರತಿಕ್ರಿಯೆ ನೀಡುತ್ತೇನೆ. ಅಲ್ಲಿಯವರೆಗೂ ಏನನ್ನೂ ಮಾತನಾಡಲ್ಲ ಎಂದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…