ಮೈಸೂರು ನಗರ

ಮುಡಾ ಅನುದಾನ ಬಳಕೆ ಮಾಡುವುದು ತಪ್ಪಲ್ಲ: ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನ ಬಳಕೆಗೆ ಅವಕಾಶ ಇದೆ ಎಂದು ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ವ್ಯಾಪ್ತಿಯಲ್ಲಿ ಬರುವ ಶ್ರೀರಂಗಪಟ್ಟಣ ಹಾಗೂ ವರುಣ ಕ್ಷೇತ್ರದ ಅಭಿವೃದ್ಧಿಗೆ ಹಣ ಖರ್ಚು ಮಾಡಲಾಗುತ್ತದೆ. ಸಾರ್ವಜನಿಕರ ಕ್ಷೇತ್ರದ ಅಭಿವೃದ್ಧಿ ಕಾನೂನು ಪ್ರಕಾರ ಆಗಿದೆಯೇ ಹೊರತು ದುರುಪಯೋಗ ಆಗಿಲ್ಲ. ಮುಡಾ ಹಣ ಬಳಕೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದರು.

ಇನ್ನು ಪ್ರಪಂಚದಲ್ಲೇ ನಮ್ಮ ಸರ್ಕಾರ ತಂದಿರುವ ಗ್ಯಾರಂಟಿ ಯೋಜನೆಯಗಳು ಯಾರೂ ಜಾರಿ ಮಾಡಿಲ್ಲ. ವಿಪಕ್ಷದವರು ರಾಜಕೀಯ ಕಾರಣಕ್ಕಾಗಿ ತಲೆಬುಡವಿಲ್ಲದ ಆರೋಪ ಮಾಡಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಯಾವ ಕಾರಣಕ್ಕಾಗಿ ರಾಜೀನಾಮೆ ಕೊಡಬೇಕು. ಎಲ್ಲಾ ವೃತ್ತಿಯಲ್ಲಿ ತಪ್ಪು ಮಾಡುವವರು ಇದ್ದಾರೆ. ಕಪ್ಪುಚುಕ್ಕೆ ತರುವವರು ಇದ್ದಾರೆ ಎಂದು ಅಪ್ಪನ ಪರ ಬ್ಯಾಟ್‌ ಮಾಡಿದರು.

 

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಚಾ.ನಗರ | ಶೆಡ್‌, 4ಸಾವಿರ ಕೋಳಿ ಬೆಂಕಿಗಾಹುತಿ ; 25 ಲಕ್ಷ ನಷ್ಟ

ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…

9 hours ago

ಸಿಎನ್‌ಜಿ ಸಮಸ್ಯೆ ಇಲ್ಲ : ಸಚಿವ ಮುನಿಯಪ್ಪ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…

9 hours ago

ಬಲಮುರಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…

9 hours ago

ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ

ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…

9 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…

10 hours ago

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…

10 hours ago