ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಸ್ನೇಹಮಯಿ ಕೃಷ್ಣ ಒತ್ತಾಯಿಸಿದ್ದಾರೆ.
ಇಂದು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ ದೂರುದಾರ ಸ್ಮೇಹಮಯಿ ಕೃಷ್ಣ ಅವರು, ಲೋಕಾಯುಕ್ತ ಎಸ್‌ಪಿ ಉದೇಶ್‌ರಿಗೆ ಮನವಿ ಮಾಡಿದ್ದಾರೆ. ಅಲ್ಲದೇ ವಿಚಾರಣೆ ವೇಳೆ ಲೋಕಾಯುಕ್ತ ಕಚೇರಿಯಲ್ಲಿ ಸಿಸಿ ಕ್ಯಾಮರಾ ಇಲ್ಲ. ಹೀಗಾಗಿ ಕ್ಯಾಮೆರಾ ಅಳವಡಿಸುವಂತೆಯೂ ಕೂಡ ಮನವಿ ಸಲ್ಲಿಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಈಗಾಗಲೇ ತನಿಖೆ ಆರಂಭಿಸಿದ್ದು, ಮೊದಲ ಹಂತದಲ್ಲಿ ಎ3 ಆರೋಪಿ ಮಲ್ಲಿಕಾರ್ಜುನಸ್ವಾಮಿ ಮತ್ತು ಎ4 ಆರೋಪಿ ದೇವರಾಜು ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯರನ್ನೇ ಇದುವರೆಗೂ ವಿಚಾರಣೆಗೆ ಒಳಪಡಿಸಿಲ್ಲ. ಹೀಗಾಗಿ ತಕ್ಷಣವೇ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.