ಮೈಸೂರು : ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಇಂದು ನಗರದಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.
ಮಹಾರಾಜ ಕಾಲೇಜು ಮೈದಾನಲ್ಲಿ ಬೆಳಿಗ್ಗೆ ೧೦ ೩೦ಕ್ಕೆ ಪ್ರತಿಭಟನಾ ಸಭೆ ನಡೆಸಿ ಬಳಿಕ ಪಾದಯಾತ್ರೆಯ ಮೂಲಕ ಮುಡಾ ಕಚೇರಿ ಆವರಣಕ್ಕೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ , ಶಾಸಕ ಸಿ.ಎನ್ ಅಶ್ವತ್ಥ ನಾರಾಯಣ್ , ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ಅಲ್ಲದೆ ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಂದ ಸುಮಾರು ೧೦ ಸಾವಿರ ಜನರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.