ಮೈಸೂರು: ಸೈಟ್ ವಾಪಸ್ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಪತ್ನಿಯವರು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ವಿಷಯಗಳಿಂದ ಸಿದ್ದರಾಮಯ್ಯ ಪತ್ನಿಯವರಿಗೆ ತೀವ್ರ ನೋವಾಗಿದೆ. ಈ ರೀತಿಯ ನಿರ್ಧಾರದಿಂದ ಅವರು ತುಂಬಾ ನೋವು ಅನುಭವಿಸಿದ್ದಾರೆ. ಅವರು ಗಂಡನ ರಾಜಕೀಯ ಏಳಿಗೆಯನ್ನು ದೂರದಲ್ಲೇ ನಿಂತು ಸಂತಸ ಪಡುತ್ತಿದ್ದಾರೆ. ಇಂತಹ ಕುಟುಂಬದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ದ್ವೇಷದ ರಾಜಕಾರಣ ಮಾಡಿದ್ದು ಸರಿಯಲ್ಲ ಎಂದು ಕಿಡಿಕಾರಿದರು.
ಸಿಎಂ ಪತ್ನಿಯಾಗಿ ಅವರು ಯಾವುದೇ ಆಸೆ ಆಕಾಂಕ್ಷೆಗಳನ್ನು ವ್ಯಕ್ತಪಡಿಸಲಿಲ್ಲ. ನಾವು ಬಿಜೆಪಿ ಹಾಗೂ ಜೆಡಿಎಸ್ ನಾಯಕರ ದ್ವೇಷ ರಾಜಕಾರಣವನ್ನು ಖಂಡಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು.