ಮೈಸೂರು ನಗರ

ಸೈಟ್‌ ವಾಪಸ್ ನೀಡಿ ಸಿದ್ದರಾಮಯ್ಯ ಪತ್ನಿಯವರು ಮಾದರಿಯಾಗಿದ್ದಾರೆ: ಡಾ.ಪುಷ್ಪ ಅಮರನಾಥ್‌

ಮೈಸೂರು: ಸೈಟ್‌ ವಾಪಸ್‌ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಪತ್ನಿಯವರು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್‌ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ವಿಷಯಗಳಿಂದ ಸಿದ್ದರಾಮಯ್ಯ ಪತ್ನಿಯವರಿಗೆ ತೀವ್ರ ನೋವಾಗಿದೆ. ಈ ರೀತಿಯ ನಿರ್ಧಾರದಿಂದ ಅವರು ತುಂಬಾ ನೋವು ಅನುಭವಿಸಿದ್ದಾರೆ. ಅವರು ಗಂಡನ ರಾಜಕೀಯ ಏಳಿಗೆಯನ್ನು ದೂರದಲ್ಲೇ ನಿಂತು ಸಂತಸ ಪಡುತ್ತಿದ್ದಾರೆ. ಇಂತಹ ಕುಟುಂಬದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ದ್ವೇಷದ ರಾಜಕಾರಣ ಮಾಡಿದ್ದು ಸರಿಯಲ್ಲ ಎಂದು ಕಿಡಿಕಾರಿದರು.

ಸಿಎಂ ಪತ್ನಿಯಾಗಿ ಅವರು ಯಾವುದೇ ಆಸೆ ಆಕಾಂಕ್ಷೆಗಳನ್ನು ವ್ಯಕ್ತಪಡಿಸಲಿಲ್ಲ. ನಾವು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ದ್ವೇಷ ರಾಜಕಾರಣವನ್ನು ಖಂಡಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹಾಸನ | ವಿದ್ಯುತ್‌ ಶಾಕ್‌ಗೆ ಕಂಬದಿಂದ ಬಿದ್ದ ಕಾರ್ಮಿಕರು: ಓರ್ವ ಸಾವು

ಹಾಸನ: ಕಂಬ ಏರಿ ವಿದ್ಯುತ್‌ ತಂತಿ ದುರಸ್ತಿ ಮಾಡುವಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್‌…

5 mins ago

ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ 45 ಚಿತ್ರದ ಟ್ರೇಲರ್‌ ರಿಲೀಸ್‌

ಬೆಂಗಳೂರು: ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 45 ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದೆ. ಖ್ಯಾತ ಸಂಗೀತ ನಿರ್ದೇಶಕ…

15 mins ago

ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಇಡಿ ಚಾರ್ಜ್‌ಶೀಟ್‌ ಪರಿಗಣಿಸಲು ಕೋರ್ಟ್‌…

48 mins ago

ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಭೇಟಿ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಭೇಟಿ ನೀಡಿ ತಾಯಿಯ ದರ್ಶನ…

2 hours ago

ಕೊಡಗು: ಚಟ್ಟಳ್ಳಿ ಕಾಫಿ ತೋಟದಲ್ಲಿ ಹುಲಿ ಸಾವು

ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಕೆಚ್ಚೆಟ್ಟರ ಎಸ್ಟೇಟ್‌ ಕಾಫಿ ತೋಟದಲ್ಲಿ ಹುಲಿಯೊಂದು ಸಾವನ್ನಪ್ಪಿದೆ. ಕಳೆದ ಕೆಲ ದಿನಗಳ ಹಿಂದೆ…

2 hours ago

ನಂಜನಗೂಡಿನಲ್ಲಿ ಮುಂದುವರಿದ ಕಳ್ಳರ ಹಾವಳಿ: ಶಿಕ್ಷಕ ದಂಪತಿ ಮನೆಯಲ್ಲಿ ಕಳ್ಳತನ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಸೂರ್ಯೋದಯ ನಗರ ಬಡಾವಣೆಯಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಮುಸುಕುಧಾರಿ…

2 hours ago