ಮೈಸೂರು ನಗರ

ಶಾಂತಿನಗರದಲ್ಲಿ ಯುವಕನ ಕೊಲೆ ಪ್ರಕರಣ: ತಾಯಿಯ ಆಕ್ರಂದನ

ಮೈಸೂರು: ಗಾಂಜಾ, ಡ್ರಗ್ಸ್‌ ಸೇವಿಸಿ ನನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಯುವಕನ ತಾಯಿ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರಿನ ಶಾಂತಿನಗರದಲ್ಲಿ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಈ ಬಗ್ಗೆ ಮಾತನಾಡಿರುವ ಅವರು, ಗಾಂಜಾ, ಡ್ರಗ್ಸ್ ಸೇವಿಸಿ ನನ್ನ ಮಗನನ್ನ ಕೊಲೆ ಮಾಡಿದ್ದಾರೆ. ಶಾಂತಿ ನಗರದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ. ಚಿಕ್ಕ ಚಿಕ್ಕ ಬಾಲಕರು ಡ್ರಗ್ಸ್, ಗಾಂಜಾ, ಟ್ಯಾಬ್ಲೆಟ್ ಹಾಗೂ ಸೆಲ್ಯೂಷನ್ ಸೇವನೆ ಮಾಡುತ್ತಿದ್ದಾರೆ. ಪ್ರತಿನಿತ್ಯ ಬಾಲಕರು ನಶೆಯಲ್ಲಿರುತ್ತಾರೆ. ನನ್ನ ಮಗ ಸೂಫಿಯನ್ ಇಂದು ಬೆಳಗ್ಗೆ ನಮಾಜ್‌ಗೆ ಹೋಗಿದ್ದ. ನಂತರ ಟೀ ಕುಡಿಯುವಾಗ ಸ್ನೇಹಿತರೇ ಚಾಕು ಹಾಕಿ ಕೊಲೆ ಮಾಡಿದ್ದಾರೆ. ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ. ಇಲ್ಲವಾದ್ರೆ ನಮ್ಮನ್ನ ಕೊಲೆ ಮಾಡಿ ಎಂದು ಸೂಫಿಯಾನ್ ತಾಯಿ ಶಾಯಿನ್ ತಾಜ್ ಗೋಳಾಡಿದರು.

ಆಂದೋಲನ ಡೆಸ್ಕ್

Recent Posts

ಯುದ್ಧಕ್ಕೆ ದಿನಾಂಕ ಫಿಕ್ಸ್: ‘ವಿಜಯದಶಮಿ’ಗೆ ಸಮರ ಸಾರಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…

11 hours ago

ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ಘೋಷಿಸಿದ ಪಾಕ್‌

ಇಸ್ಲಾಮಾಬಾದ್:‌ ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…

11 hours ago

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…

13 hours ago

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…

13 hours ago

ಹನೂರು: ಬಿಸಿಯೂಟಕ್ಕೂ ನೀರಿಲ್ಲ – ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…

13 hours ago

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…

17 hours ago