ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ
ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದ್ದು, ಲೋಕ ಕಲ್ಯಾಣದೊಂದಿಗೆ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ವಿಜಯನಗರದ ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳನ್ನು ತಯಾರಿಸಲಾಗುತ್ತಿದೆ.
ಜ.1ರಂದು ದೇವಸ್ಥಾನಕ್ಕೆ ಬರುವ ಭಕ್ತರಿಗೆ ಲಡ್ಡುಗಳನ್ನು ವಿತರಿಸಲಾಗುತ್ತಿದ್ದು, ಅದಕ್ಕಾಗಿ ತಿರುಪತಿ ಮಾದರಿಯ 1 ಲಕ್ಷ ಲಡ್ಡುಗಳು ಸಿದ್ಧವಾಗುತ್ತಿವೆ. ಅಂದು ಮುಂಜಾನೆ 4 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಭಕ್ತಾದಿಗಳಿಗೆ ಲಡ್ಡುಗಳನ್ನು ವಿತರಿಸಲಾಗುವುದು ಎಂದು ಯೋಗಾನರಸಿಂಹಸ್ವಾಮಿ ದೇಗುಲದ ಸಂಸ್ಥಾಪಕ ಪ್ರೊ.ಭಾಷ್ಯಂ ಸ್ವಾಮೀಜಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
1994ರಿಂದ ಲಡ್ಡು ವಿತರಿಸುವ ಕಾರ್ಯವನ್ನು ನಡೆಸಿಕೊಂಡು ಬರಲಾಗಿದ್ದು, ಹೊಸ ವರ್ಷದಂದು ಶ್ರೀ ಯೋಗಾನರಸಿಂಹಸ್ವಾಮಿಯವರಿಗೆ ವಿಶೇಷ ಅಲಂಕಾರ ಮತ್ತು ಶ್ರೀರಂಗ, ಮಧುರೈ ಕ್ಷೇತ್ರದಿಂದ ತರಿಸಿರುವ ವಿಶೇಷ ತೋಮಾಲೆ ಮತ್ತು ಸ್ವರ್ಣಪುಷ್ಪದಿಂದ ಶ್ರೀಸ್ವಾಮಿಗೆ ಸಹಸ್ರನಾಮಾರ್ಚನೆ ಮತ್ತು ದೇವಾಲಯದ ಉತ್ಸವ ಮೂರ್ತಿಯಾದ ರಂಗನಾಥಸ್ವಾಮಿಗೆ ದೇವಾಲಯದ ಆವರಣದಲ್ಲಿ ಏಕಾದಶ ಪ್ರಾಕಾರೋತ್ಸವ ಹಾಗೂ 50 ಕ್ವಿಂಟಾಲ್ ಪುಳಿಯೊಗರೆ ನಿವೇದನೆ ಮಾಡಲಾಗುತ್ತಿದ್ದು, ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಇದನ್ನು ಓದಿ: ರೈಲು ಪ್ರಯಾಣ ದರ ಹೆಚ್ಚಳ | ರಾಜ್ಯ ಬಿಜೆಪಿ ನಾಯಕರ ಮೌನವೇಕೆ : ಸಿ.ಎಂ ಪ್ರಶ್ನೆ
ತಿರುಪತಿ ಮಾದರಿಯ 2 ಲಕ್ಷ ಲಡ್ಡು:
ದೇವಸ್ಥಾನದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಮಾತನಾಡಿ, ಈ ವರ್ಷ ಅಂದಾಜು ೨ ಕೆಜಿ ತೂಕದ ೧೦ ಸಾವಿರ ಲಡ್ಡುಗಳು ಹಾಗೂ ೧೫೦ ಗ್ರಾಂ ತೂಕದ ೨ ಲಕ್ಷ ಲಡ್ಡುಗಳನ್ನು ದೇವಾಲಯಕ್ಕೆ ಬರುವ ಎಲ್ಲಾ ಭಕ್ತಾದಿಗಳಿಗೆ ಯಾವುದೇ ಜಾತಿ, ಮತ ಭೇದವಿಲ್ಲದೆ ಉಚಿತವಾಗಿ ವಿತರಿಸಲಾಗುವುದು. ಲಡ್ಡು ಪ್ರಸಾದವನ್ನು ವಿಶೇಷವಾಗಿ ೧೦೦ ಮಂದಿ ನುರಿತ ಬಾಣಸಿಗರಿಂದ ತಯಾರಿಸಲಾಗಿದ್ದು, ಡಿ.೨೦ರಿಂದ ಪ್ರಾರಂಭಿಸಿ ೩೧ರವರೆಗೂ ಲಡ್ಡು ತಯಾರಿ ಕಾರ್ಯ ನಡೆಯಲಿದೆ ಎಂದರು.
ಲಡ್ಡು ತಯಾರಿಕೆಗೆ ಬಳಸಿರುವ ಸಾಮಾಗ್ರಿಗಳು
ಲಡ್ಡು ತಯಾರಿಕೆಗೆ ೧೦೦ ಕ್ವಿಂಟಾಲ್ ಕಡ್ಲೆಹಿಟ್ಟು, ೨೦೦ ಕಿಂಟಾಲ್ ಸಕ್ಕರೆ, ೧೦ ಸಾವಿರ ಲೀಟರ್ ಖಾದ್ಯ ತೈಲ, ೫೦೦ ಕೆಜಿ ಗೋಡಂಬಿ, ೫೦೦ ಕೆಜಿ ಒಣದ್ರಾಕ್ಷಿ, ೨೫೦ ಕೆಜಿ ಬಾದಾಮಿ, ೧ ಸಾವಿರ ಕೆಜಿ ಡೈಮಂಡ್ ಸಕ್ಕರೆ, ೨ ಸಾವಿರ ಕೆಜಿ ಬೂರಾ ಸಕ್ಕರೆ, ೫೦ ಕೆಜಿ ಪಿಸ್ತಾ, ೫೦ ಕೆಜಿ ಏಲಕ್ಕಿ, ೫೦ ಕೆಜಿ ಜಾಕಾಯಿ ಮತ್ತು ಜಾಪತ್ರೆ, ೫೦ ಕೆಜಿ ಪಚ್ಚೆ ಕರ್ಪೂರ, ೨೦೦ ಕೆಜಿ ಲವಂಗಗಳನ್ನು ಬಳಸಿ ತಯಾರಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಡಾ.ರಾಜ್‌ಕುಮಾರ್ ಪುತ್ರಿ ಲಕ್ಷ್ಮಿ, ಅಳಿಯ ಗೋವಿಂದರಾಜು ಸೇರಿದಂತೆ ಹಲವರು ಹಾಜರಿದ್ದರು.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…