ಮೈಸೂರು ನಗರ

ಮೈಸೂರು: ಜಿಲ್ಲೆಯಲ್ಲಿ 55 ಸಾವಿರ ಜನರಿಂದ ಬೃಹತ್ ಮಾನವ ಸರಪಳಿ

ಮೈಸೂರು: ಸೆಪ್ಟೆಂಬರ್ 15ರಂದು  ರಾಜ್ಯ ಸರ್ಕಾರವು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಅಂಗವಾಗಿ ಬೃಹತ್ ಮಾನವ ಸರಪಳಿಯನ್ನು ಏರ್ಪಡಿಸುತ್ತಿದೆ.

ಪ್ರಜಾಪ್ರಭುತ್ವಕ್ಕಾಗಿ ಕರ್ನಾಟಕದಲ್ಲಿ ಮಾನವ ಸರಪಳಿ ಸಮಾನತೆ, ಭ್ರಾತೃತ್ವ ಮತ್ತು ಸ್ವಾತಂತ್ರ್ಯಕ್ಕೆ ಜಯವಾಗಲಿದೆ.  ರಾಜ್ಯಾದ್ಯಂತ ಸುಮಾರು 25 ಲಕ್ಷ ಜನರನ್ನು ಉಪಯೋಗಿಸಿ ಕೊಂಡು ಸುಮಾರು 2500 ಕಿಲೋಮೀಟರ್ ಉದ್ದದ ಮಾನವ ಸರಪಳಿಯನ್ನು ರಚಿಸಲಾಗುತ್ತಿದೆ.

ಮೈಸೂರು ಜಿಲ್ಲೆಯಲ್ಲಿಯೂ ಈ ಮಾನವ ಸರಪಳಿ ರಚನೆಗೊಳ್ಳುತ್ತಿದ್ದು ಮೈಸೂರು ಜಿಲ್ಲೆಯ ಗಡಿ ಭಾಗದ ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಿಂದ ಪ್ರಾರಂಭವಾಗಿ ಟಿ.ನರಸಿಪುರ ತಾಲೂಕಿನ ಮೂಗೂರು ಗ್ರಾಮದ ಚಾಮರಾಜನಗರ ಜಿಲ್ಲೆಯ ಗಡಿಯನ್ನು ಕೊನೆಗೊಳ್ಳುತ್ತದೆ.

ಜಿಲ್ಲೆಯಲ್ಲಿ 58 ಕಿಮೀ ಮಾನವ ಸರಪಳಿ

ಜಿಲ್ಲೆಗೆ ಸಂಬಂಧಿಸಿದಂತೆ ಈ ಬೃಹತ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಸುಮಾರು 55,000 ಜನರು ಒಳಗೊಂಡು 58ಕಿ.ಮೀ ಮಾನವ ಸರಪಳಿ ರಚನೆಯಲ್ಲಿ ಜಿಲ್ಲೆಯ ಎಲ್ಲಾ ಎಲ್ಲ ಸಂಘಟನೆ ಪದಾಧಿಕಾರಿಗಳು ಜನಪ್ರತಿನಿಧಿಗಳು ಸಮುದಾಯದ ಮುಖಂಡರುಗಳು ಶಾಲೆ- ಕಾಲೇಜು ವಿದ್ಯಾರ್ಥಿಗಳು ಮಾನವ ಸರಪಳಿಯಲ್ಲಿ ಭಾಗವಹಿಸಲಾಗುತ್ತಿದೆ.

ಕಾರ್ಯಕ್ರಮವ ಪಟ್ಟಿ ಹೀಗಿದೆ..

ವೇದಿಕೆ ಕಾರ್ಯಕ್ರಮ ಅರಮನೆ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಆಯೋಜಿಸಲಾಗಿದೆ.

ಬೆಳಿಗ್ಗೆ 9,30 ರಿಂದ 9,37 ರವರಗೆ ಮಾನವ ಸರಪಳಿಯಲ್ಲಿ ಭಾಗವಹಿಸುವವರು ಸರತಿ ಸಾಲಿನಲ್ಲಿ ನಿಲ್ಲುವುದು.

9,37 ರಿಂದ 9,40 ರವರಗೆ ನಾಡಗೀತೆ

9,40 ರಿಂದ 9,55 ರವರಗೆ ಮುಖ್ಯ ಅತಿಥಿಗಳಿಂದ ಭಾಷಣ

9,55 ರಿಂದ 9,57 ರವರಗೆ ಸಂವಿಧಾನದ ಪ್ರಸ್ತಾವನೆ ಓದುವುದು

9,57 ರಿಂದ 9,59 ಮಾನವ ಸರಪಳಿಯಲ್ಲಿ ಕೈ, ಕೈ ಹಿಡಿದು ನಿಲ್ಲುವುದು

10 ಗಂಟೆಗೆ ಮಾನವ ಸರಪಳಿಯಲ್ಲಿಯೇ ತಮ್ಮ ಎರಡೂ ಕೈಗಳನ್ನು ಮೇಲೆತ್ತಿ ಜೈಹಿಂದ್, ಜೈ ಕರ್ನಾಟಕ ಘೋಷಣೆ ಕೂಗಿ ಸರಪಳಿಯನ್ನು ಕಳಚುವುದು.

ಮಾನವ ಸರಪಳಿ ಮಾರ್ಗ 

ಮೈಸೂರು ತಾಲೂಕಿನ ಕಳಸ್ತವಾಡಿ ಸಿದ್ದಲಿಂಗ ಪುರದಿಂದ ಪ್ರಾರಂಭವಾಗಿ ಮಣಿಪಾಲ್ ಆಸ್ಪತ್ರೆ, ಪೌಂಟನ್ ಸರ್ಕಲ್, ಗಾಂಧಿ ನಗರದ ಅಂಬೇಡ್ಕರ್ ವೃತ್ತ, ಟೌನ್ಹಾಲ್, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ, ಹಾರ್ಡಿಂಜ್ ಸರ್ಕಲ್, ಮೃಗಾಲಯ, ರೇಸ್ ಕೋರ್ಸ್ ಸರ್ಕಲ್, ಪೊಲೀಸ್ ಭವನ, ಸಂಗೊಳ್ಳಿ ರಾಯಣ್ಣ ಸರ್ಕಲ್, ಕಮಾನ್ ಗೇಟ್, ರಿಂಗ್ ರಸ್ತೆ, ವರುಣ ಗ್ರಾಮ, ಕೀಳನ ಪುರ, ಕೆಂಪಯ್ಯನ ಹುಂಡಿ, ಇಂಡುವಾಳು, ಗರ್ಗೇಶ್ವರಿ, ತಿ.ನರಸೀಪುರ ಟೌನ್, ಗಂಜಾಂ ನರಸಿಂಹ ಸ್ವಾಮಿ ದೇವಸ್ಥಾನ, ಅಲಗೂಡು, ಕುರಬೂರು, ಮಾಡ್ರಳ್ಳಿ ಗೇಟ್, ಮೂಗೂರು ಗ್ರಾಮದ ಮೂಲಕ ಚಾಮರಾಜ ನಗರ ಜಿಲ್ಲೆಯ ಗಡಿ ಪ್ರವೇಶಿಸಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

3 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

3 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

3 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

5 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

7 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

13 hours ago