ಮೈಸೂರು ನಗರ

ಮೈಸೂರು | ಲಾಭದಾಸೆಗೆ ಬಿದ್ದ ಮಹಿಳೆಗೆ 1.58 ಕೋಟಿ ರೂ.ವಂಚನೆ! ಮೋಸ ಹೋಗಿದ್ದೇಗೆ?

ಮೈಸೂರು : ಹೆಚ್ಚಿನ ಲಾಭದಾಸೆಗೆ ಬಿದ್ದು ನಕಲಿ ಕಂಪನಿ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ ಮಹಿಳೆಯೊಬ್ಬರು ಬರೋಬ್ಬರಿ 1.58 ಕೋಟಿ ರೂ. ಹಣವನ್ನು ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಈ ಸಂಬಂಧ ಮೈಸೂರಿನ ಸೈಬರ್‌ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನಗರದ ಜೆಪಿನಗರ ನಿವಾಸಿ ಮಹಿಳೆಗೆ ವಾಟ್ಸಾಪ್ ಗ್ರೂಪ್‌ನಲ್ಲಿ ಷೇರು ಮಾರುಕಟ್ಟೆ ಬಗ್ಗೆ ಮಾಹಿತಿ ದೊರಕಿದೆ. ನಂತರ ಅವರು ಸ್ಯಾಮ್ಕೋ ಹಾಗೂ ಟೆನ್‌ಕೋರ್ ಎಂಬ ಆಪ್ ಮೂಲಕ ಮೊದಲಿಗೆ 60 ಸಾವಿರ ರೂ. ಹಣ ಹೂಡಿಕೆ ಮಾಡಿದ್ದಾರೆ.

ಇದನ್ನೂ ಓದಿ :-12 ರಾಜ್ಯಗಳಲ್ಲಿ SIR ಜಾರಿ ; ಕರ್ನಾಟಕದಲ್ಲೂ ನಡೆಯುತ್ತಾ? ಏನಿದು SIR, ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್….

ಇದರಿಂದಾಗಿ ವಂಚಕರು ಅವರಿಗೆ ಲಾಭವನ್ನು ನೀಡಿ ಹಣದ ಆಸೆ ಹುಟ್ಟಿಸಿದ್ದಾರೆ. ನಂತರ ಆಕೆ ಹೆಚ್ಚಿನ ಹಣದಾಸೆಗೆ ಹಂತಹಂತವಾಗಿ ತನ್ನ ಬ್ಯಾಂಕ್ ಖಾತೆಯಿಂದ ವಂಚಕರ ಖಾತೆಗೆ 1,58,93000 ರೂ. ಹಣವನ್ನು ವರ್ಗಾಯಿಸಿದ್ದಾರೆ.

ನಂತರ ವಂಚಕರು ನಿಮಗೆ ಹೆಚ್ಚಿನ ಲಾಭ ಬಂದಿದೆ. ಹಣವನು ಪಡೆಯಲು 16 ಲಕ್ಷ ರೂ. ಹಣವನ್ನು ಖಾತೆಗೆ ಜಮೆ ಮಾಡುವಂತೆ ಹೇಳಿದ್ದಾರೆ. ಇದರಿಂದ ಅನುಮಾನಗೊಂಡ ಆಕೆ ವಿಚಾರಿಸಿದ ವೇಳೆ ತಾನು ಮೋಸ ಹೋಗಿರುವುದು ಗೊತ್ತಾಗಿದೆ. ಕೂಡಲೇ ಆಕೆ ಸೈಬರ್ ಅಪರಾಧ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

7 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

7 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

7 hours ago