Mysore
26
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಮೈಸೂರು | ಎಐನಲ್ಲಿ ಕ್ರಿಯೇಟ್‌ ಮಾಡಿರುವ ಚಿರತೆ ಫೋಟೋ ವೈರಲ್‌

ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು ಚಿರತೆ ಕುಳಿತಿದೆ ಎಂಬ ಫೋಟೋವೊಂದು ಹರಿದಾಡಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಅರಣ್ಯ ಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ ಇದೊಂದು AIನಲ್ಲಿ ಕ್ರಿಯೇಟ್ ಮಾಡಿರುವ ಫೋಟೋ ಆಗಿದ್ದು ಎರಡು ಮೂರು ಫೇಕ್ ಫೋಟೋಗಳು ಹರಿದಾಡುತ್ತಿದೆ.

ಇದನ್ನು ಓದಿ: ಹುಲಿ ಓಡಾಡುವ ನಕಲಿ(AI) ವಿಡಿಯೋ : ಹರಿಬಿಟ್ಟವರ ಕ್ರಮಕ್ಕೆ ಶಾಸಕ ದರ್ಶನ್‌ ಸೂಚನೆ

ಮುನ್ನೆಚ್ಚರಿಕೆ ಕ್ರಮವಾಗಿ ಮೈಸೂರಿನ ಜಯನಗರ, ಚಿಕ್ಕಹರದನಹಳ್ಳಿ ಪಂಪಾಪತಿ ರಸ್ತೆಯ ಅಂಗಡಿ ಬದಿ ವ್ಯಾಪಾರಸ್ಥರು ಹಾಗೂ ಸ್ಥಳೀಯರಿಗೆ ಸಂಜೆ 6 ಗಂಟೆ ನಂತರ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅದರಂತೆ ಪ್ರತಿದಿನ ವ್ಯಾಪಾರಸ್ಥರು ಬೇಗ ಅಂಗಡಿಗಳನ್ನು ಮುಚ್ಚಿ ವ್ಯಾಪಾರ ಸ್ಥಗಿತಗೊಳಿಸಿ ಮನೆಗಳಿಗೆ ತೆರಳುತ್ತಿದ್ದಾರೆ.
ಜೊತೆಗೆ ಸಂಜೆಯಾಗುತ್ತಿದ್ದಂತೆ ರಸ್ತೆಯಲ್ಲಿ ಕಡಿಮೆ ಪ್ರಮಾಣದಲ್ಲಿ ಜನರು ಓಡಾಡುತ್ತಿದ್ದಾರೆ ಎಂದು ಅಲ್ಲಿನ ಸ್ಥಳೀಯರು ತಿಳಿಸುತ್ತಿದ್ದಾರೆ.

ಒಟ್ಟಾರೆ ಕಿಡಿಗೇಡಿಗಳು AIನಲ್ಲಿ ಫೇಕ್ ಫೋಟೋವೊಂದನ್ನು ರಚಿಸಿ ಸ್ಥಳೀಯರಿಗೆ ಭಯವನ್ನುಂಟು ಮಾಡುವುದರ ಜೊತೆಗೆ ವ್ಯಾಪಾರಸ್ಥರ ವ್ಯಾಪಾರಕ್ಕೆ ಸಂಚಕಾರ ತಂದಿಟ್ಟಿದ್ದಾರೆ.

ಈ ಸಂಬಂಧ ಅರಣ್ಯ ಇಲಾಖೆಯ ಅಧಿಕಾರಿಗಳು ಸಭೆ ನಡೆಸುತ್ತಿದ್ದು ಈ ರೀತಿ ಫೇಕ್ ಫೋಟೋಗಳನ್ನು ಹರಡುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Tags:
error: Content is protected !!