ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು ಎಂದು ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಪೊಲೀಸ್ ಮಹಾನಿರ್ದೇಶಕ ಅಲೋಕ್‌ಕುಮಾರ್ ಸಲಹೆ ನೀಡಿದರು.
ನಗರದ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಪರಿಶೀಲಿಸಿದ ಬಳಿಕ ಬಂಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಶಿಕ್ಷಾ ಬಂಧಿಗಳಿಗೆ ಸರ್ಕಾರದಿಂದ ದೊರೆಯಬಹುದಾದ ಎಲ್ಲ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತದೆ ಎಂದರು.
ಈ ವೇಳೆ ಕಾರಾಗೃಹದಲ್ಲಿ ಉತ್ತಮ ನಡತೆಯುಳ್ಳ ಶಿಕ್ಷಾಬಂಧಿ ಹಾಗೂ ವಿಚಾರಣಾ ಬಂಧಿಗಳಿಗೆ ಪ್ರಶಂಸನಾ ಪತ್ರ ವಿತರಿಸಿದರು. ಬಂಧಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. 2025ನೇ ಸಾಲಿನಲ್ಲಿ ಕಾರಾಗೃಹದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು, ಸಿಬ್ಬಂದಿಗೆ ಪ್ರಶಂಸನಾ ಪತ್ರ ನೀಡಿದರು. ಬಳಿಕ 2026ನೇ ವರ್ಷದ ಟೇಬಲ್ ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ದಕ್ಷಿಣ ವಲಯದ ಉಪ ಮಹಾನಿರೀಕ್ಷಕರಾದ ಕೆ.ಸಿ.ದಿವ್ಯಶ್ರೀ, ಕೆಎಸ್‌ಐಎಸ್‌ಎಫ್ ಕಮಾಂಡೆಂಟ್ ಕೆ.ಎಂ.ಮಹದೇವ ಪ್ರಸಾದ್, ಮುಖ್ಯ ಅಧಿಕ್ಷಕ ವಿ.ಶೇಷುಮೂರ್ತಿ, ಅಧಿಕ್ಷಕ ಎಂ.ಎಚ್.ಆಶೇಖಾನ್ ಹಾಜರಿದ್ದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…