ಮೈಸೂರು : ಗಾಂಜ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿರುವ ಕೆ.ಆರ್ ಠಾಣಾ ಪೊಲೀಸರು, ಆವರಿಂದ 3.44 ಕೆಜಿ ಗಾಂಜವನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಕಾಕರವಾಡಿ ನಿವಾಸಿ ಇರ್ಫಾನ್ ಹಾಗೂ ಮದ್ದೂರಿನ ಸುಹೇಲ್ ಪಾಷಾ ಬಂಧಿತ ಆರೋಪಿಗಳು.
ನಗರದ ಜೆಎಸ್‌ಎಸ್ ಆಸ್ಪತ್ರೆಯ ಮುಂಬಾಗದ ರಸ್ತೆಯಲ್ಲಿ ಆರೋಪಿಗಳು ಗಾಂಜ ಮಾರಾಟ ಮಾಡಲು ಯತ್ನಿಸುತ್ತಿರುವ ವಿಚಾರ ಪೊಲೀಸರಿಗೆ ತಿಳಿದುಬಂದಿತ್ತು. ಕೂಡಲೇ ಪೊಲೀಸರ ತಂಡ ಸ್ಥಳಕ್ಕೆ ತೆರಳಿದ್ದಾರೆ.
ಇದನ್ನೂ ಓದಿ:-IPL ಚಾಂಪಿಯನ್ RCB ಮಾರಾಟಕ್ಕಿದೆ.. ! ಯಾರ ಪಾಲು..? ಎಷ್ಟು ಮೊತ್ತಾ ಗೊತ್ತಾ?
ಪೊಲೀಸರನ್ನು ಕಂಡೊಡನೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅವರನ್ನು ಸುತ್ತುವರೆದ ಪೊಲೀಸರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಆರೋಪಿಗಳ ಬಳಿ ಇದ್ದ ಗಾಂಜವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಎಂಡಿಎಂಎ ವಶ
ಇದೇ ವೇಳೆ ನಗರದ ರಾಜೀವ್‌ನಗರ 2ನೇ ಹಂತದ ಬಳಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಕಲ್ಯಾಣಗಿರಿ ನಿವಾಸಿ ಮಹಮದ್ ಉಬೇದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನಿಂದ ಸಾವಿರಾರು ರೂ. ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದಿರುವ ಉದಯಗಿರಿ ಠಾಣಾ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…