ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಕುವೆಂಪುನಗರದ ಆದಿಚುಂಚನಗಿರಿ ಮುಖ್ಯ ರಸ್ತೆಯಲ್ಲಿ ರುವ ಟ್ರಿನಿಟಿ ಇಂಟರ್ ನ್ಯಾಷನಲ್ ಸ್ಕೂಲ್‌ನ ಆವರಣದಲ್ಲಿ ಆಡಿಷನ್ ನಡೆಯಲಿದೆ.
5ರಿಂದ 12 ವರ್ಷ ವಯೋಮಿತಿಯ ಮಕ್ಕಳು ಈ ಆಡಿಷನ್‌ನಲ್ಲಿ ಭಾಗವಹಿಸಬಹುದು. ಆಯ್ಕೆಯಾದ ಮಕ್ಕಳು ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಷೋನಲ್ಲಿ ಜನಪ್ರಿಯ ಟಿವಿ ಕಲಾವಿದರೊಂದಿಗೆ ಪಾಲ್ಗೊಳ್ಳಬಹುದು. ಅವರಿಗೆ ಅತ್ಯುತ್ತಮ ತರಬೇತಿಯನ್ನೂ ನೀಡಲಾಗುತ್ತದೆ. ಮಕ್ಕಳ ಸಂಭಾಷಣಾ ಸಾಮರ್ಥ್ಯ, ತಕ್ಷಣದ ಪ್ರತಿಕ್ರಿಯೆ, ಕಥೆ ಹೇಳುವ ಶೈಲಿ ಇತ್ಯಾದಿ ಅಂಶಗಳನ್ನು ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸಲಾಗುತ್ತದೆ.
ಇದನ್ನು ಓದಿ: ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
ಮೈಸೂರಿನ ಆಡಿಷನ್‌ನಲ್ಲಿ ಆಯ್ಕೆಯಾದ ಮಕ್ಕಳಿಗೆ ಮುಂದಿನ ಹಂತಗಳ ಆಡಿಷನ್ಸ್ ಮತ್ತು ಅಂತಿಮ ಆಯ್ಕೆ ಬೆಂಗಳೂರಿನಲ್ಲಿ ನಡೆಯಲಿದೆ. ಹೆಚ್ಚಿನ ವಿವರಗಳನ್ನು ಆಡಿಷನ್ ಸ್ಥಳದಲ್ಲಿ ನೀಡಲಾಗುವುದು. ಆಸಕ್ತ ಮಕ್ಕಳು ನಿಗದಿತ ದಿನಾಂಕದಂದು ಪೋಷಕರೊಂದಿಗೆ ಭಾವಚಿತ್ರ ಮತ್ತು (ಮಕ್ಕಳ ಮತ್ತು ಪೋಷಕರ) ಆಧಾರ್ ಕಾರ್ಡ್‌ನ ಜೆರಾಕ್ಸ್ ಪ್ರತಿ ಸಹಿತ ಆಡಿಷನ್‌ಗೆ ಹಾಜರಾಗಬೇಕು ಎಂದು ಕಲರ್ಸ್ ಕನ್ನಡ ವಾಹಿನಿಯ ಪ್ರಕಟಣೆ ತಿಳಿಸಿದೆ.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…