ಮೈಸೂರು: ಶೂ ಒಳಗೆ ಬೆಚ್ಚಗೆ ಮಲಗಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಖ್ಯಾತ ಉರಗ ತಜ್ಞ ಸ್ನೇಕ್ ಶ್ಯಾಮ್ ಯಶಸ್ವಿಯಾಗಿದ್ದಾರೆ.
ಮೈಸೂರಿನ ಹೂಟಗಳ್ಳಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ನಾಗರಹಾವಿನ ಮರಿಯೊಂದು ಶೂ ಒಳಗೆ ಬೆಚ್ಚಗೆ ಮಲಗಿತ್ತು.
ಹಾವನ್ನು ಕಂಡು ಹೆದರಿದ ಮನೆಯವರು ಕೂಡಲೇ ಸ್ನೇಕ್ ಶ್ಯಾಮ್‌ಗೆ ಕರೆ ಮಾಡಿ ವಿಷಯ ತಿಳಿಸಿದರು. ಸ್ಥಳಕ್ಕಾಗಮಿಸಿದ ಸ್ನೇಕ್ ಶ್ಯಾಮ್ ನಾಗರಹಾವಿನ ಮರಿಯನ್ನು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ.





