ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಖಂಡಿಸಿ ಮೈಸೂರಿನಲ್ಲಿ ಬಂದ್ ಕರೆ ನೀಡಲಾಗಿತ್ತು. ಇದೀಗ ಪ್ರತಿಭಟನೆಗೆ ವಕೀಲರು ಬೆಂಬಲ ಸೂಚಿಸಿದ್ದಾರೆ.
ನಗರದಲ್ಲಿ ಇಂದು(ಜನವರಿ.7) ಪ್ರಗತಿ ಪರ ಸಂಘಟನೆಗಳ ವತಿಯಿಂದ ಮೈಸೂರು ಬಂದ್‌ಗೆ ಕರೆ ನೀಡಿವೆ. ಈ ಬಂದ್‌ಗೆ ಬೆಂಬಲ ಸೂಚಿಸಿ ಈಗಾಗಲೇ ಮಾರುಕಟ್ಟೆಗಳು, ನಗರ ಮತ್ತು ಗ್ರಾಮಾಂತರ ಬಸ್ ನಿಲ್ದಾಣಗಳ ಸಾರಿಗೆ ವ್ಯವಸ್ಥೆ, ಅಂಗಡಿ, ಮಳಿಗೆಗಳು ಹಾಗೂ ಚಿಕ್ಕಗಡಿಯಾರ ಸೇರಿದಂತೆ ನಗರದದ್ಯಾಂತ ಅನೇಕ ಕಡೆಗಳಲ್ಲಿ ಬಂದ್‌ಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಅಂದರಂತೆಯೇ ವಕೀಲ ಸಂಘಟನೆಗಳು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿವೆ.
ಮೈಸೂರು ಬಂದ್ ಹಿನ್ನೆಲೆಯಲ್ಲಿ ಅಂಬೇಡ್ಕರ್ ಅವರ ವಿರುದ್ಧ ಅಮಿತ್ ಶಾರವರ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಪ್ರಗತಿ ಪರ ಸಂಘಟನೆಗಳಂತೆ ಮೈಸೂರು ವಕೀಲ ಸಂಘವೂ ಸಹ ಬೈಕ್ ರ್ಯಾಲಿ ಮುಖಾಂತರ ಪ್ರತಿಭಟನೆಯಲ್ಲಿ ಭಾಗವಹಿಸಿ ಬಂದ್‌ಗೆ ಸಂಪೂರ್ಣ ಬೆಂಬಲ ಸೂಚಿಸಿವೆ.





