ಮೈಸೂರು: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪ್ರಯತ್ನದ ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯ ಮಣಿಪಾಲ್ ಜಂಕ್ಷನ್ ಫ್ಲೈಓವರ್ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿದೆ.
ಇಂದಿನಿಂದ ಈ ಕಾಮಗಾರಿಯ ಪ್ರಕ್ರಿಯೆಗೆ ಹಸಿರು ನಿಶಾನೆ ದೊರೆಯಲಿದೆ. ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಆದೇಶ ಹೊರಡಿಸಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಯದುವೀರ್ ಒಡೆಯರ್ ಅವರು ಇಂದಿನಿಂದ ಕಾಮಗಾರಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದ್ದಾರೆ.
ಮಣಿಪಾಲ ಜಂಕ್ಷನ್ ಬಳಿ ಫ್ಲೈಓವರ್ ನಿರ್ಮಾಣ ಸಂಬಂಧ ಬೇಡಿಕೆಗಳು ಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ನಿರಂತರ ಸಭೆ ನಡೆಸಿ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಲಾಯಿತು. ಅದಕ್ಕೀಗ ಪುರಸ್ಕಾರ ದೊರೆತಿದೆ ಎಂದು ಹೇಳಿದ್ದಾರೆ.
ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…
ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…
ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…
ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…